ADVERTISEMENT

‘ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 8:49 IST
Last Updated 26 ನವೆಂಬರ್ 2017, 8:49 IST

ಹೊಸದುರ್ಗ: 2017 - 18ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ನ.30 ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ ಬೆಳೆಗೆ ಹೊಸದುರ್ಗ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಲಾಗಿದೆ. ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುವುದು.

ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ರೈತರು ₹ 6,400 ವಿಮಾ ಕಂತು ಪಾವತಿಸಿದಲ್ಲಿ ₹ 1,28,000 ವಿಮಾ ಮೊತ್ತ ಕೊಡಲಾಗುತ್ತದೆ ಎಂದು ತಾಲ್ಲೂಕು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎನ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT