ADVERTISEMENT

ಸಮರ್ಪಕ ವಿದ್ಯುತ್ ಪೂರೈಕೆಗೆ ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2012, 9:00 IST
Last Updated 21 ಮಾರ್ಚ್ 2012, 9:00 IST

ಮೊಳಕಾಲ್ಮುರು: ತಾಲ್ಲೂಕಿನ ಬಿ.ಜಿ. ಕೆರೆ ಬೆಸ್ಕಾಂ ಕಚೇರಿ ಎದುರು ಮಂಗಳವಾರ ಸೂರಮ್ಮನಹಳ್ಳಿ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಗ್ರಾಮಕ್ಕೆ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
 
ಶಾಲಾ ಮಕ್ಕಳು ಬಿಸಿಯೂಟ ನಂತರ ಶಾಲೆ ಮುಂಭಾಗದಲ್ಲಿ ಇರುವ ಜಾನುವಾರುಗಳಿಗೆ ಕುಡಿಯಲು ನಿರ್ಮಿಸಿರುವ ತೊಟ್ಟಿಯಲ್ಲಿ ನೀರು ಕುಡಿಯುವಂತಹ ಸ್ಥಿತಿ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಬಗ್ಗೆ ಸಂಬಂದಪಟ್ಟ ಬೆಸ್ಕಾಂ ವಲಯ ಅಧಿಕಾರಿಗೆ ತಿಳಿಸಿದರೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ.
ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಎಸ್.ಒ. ಪಾಲಯ್ಯ, ಎಸ್.ವಿ. ರಾಜಶೇಖರಪ್ಪ, ಡಿ. ಬೋರಯ್ಯ, ಎ.ಕೆ. ತಿಪ್ಪೇಸ್ವಾಮಿ, ಎಸ್. ಬಸಯ್ಯ, ಮಲ್ಲಿಕಾರ್ಜುನ, ಜಗನ್ನಾಥ್, ಬೋರಯ್ಯ, ಮಂಜುನಾಥ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.