ADVERTISEMENT

ಸಹಕಾರವಿದ್ದಲ್ಲಿ ಪರಿಣಾಮಕಾರಿ ಸೇವೆ.

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 5:55 IST
Last Updated 16 ಫೆಬ್ರುವರಿ 2011, 5:55 IST

ಭರಮಸಾಗರ: ಸಾರ್ವಜನಿಕರ ಸಹಕಾರವಿದ್ದಾಗ ಮಾತ್ರ ಅಧಿಕಾರಿಗಳು ಗ್ರಾಮಾಂತರ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ಸಾಧ್ಯ ಎಂದು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಬಿ. ಮಂಜುಳಮ್ಮ ತಿಳಿಸಿದರು.ಇಲ್ಲಿನ ಪವಮಾನ ಪ್ರತಿಷ್ಠಾನ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದ ಪೆಥಾಲಜಿ ವಿಭಾಗದ ಮುಖ್ಯಸ್ಥ ಡಾ.ಪಿ. ಶಶಿಕಲಾ ಕೃಷ್ಣಮೂರ್ತಿ ಮಾತನಾಡಿ, ಸಂಘ ಸಂಸ್ಥೆಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವುದರಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಮಾಡಲು ಅವರಲ್ಲಿ ಇನ್ನಷ್ಟು ಹುಮ್ಮಸ್ಸು, ಕಳಕಳಿ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸರ್ವೇಕ್ಷಣಾ ಅಧಿಕಾರಿ ಡಾ.ರಂಗನಾಥ್ ಮಾತನಾಡಿ, ಸದಾ ಒತ್ತಡದಲ್ಲಿ ಕೆಲಸ ಮಾಡುವ ವೈದ್ಯರ ಮನಸ್ಥಿತಿಯನ್ನು ಸಾರ್ವಜನಿಕರು ಅರಿತು ಸೂಕ್ತ ರೀತಿಯಲ್ಲಿ ಸ್ಪಂದಿಸುವ ಮೂಲಕ ಉತ್ತಮ ರೀತಿಯಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸಲು ಪ್ರೇರೇಪಿಸಬೇಕು ಎಂದರು.ಪ್ರತಿಷ್ಠಾನದ ವಿಜಯಲಕ್ಷ್ಮೀ, ಬಿ.ಜೆ. ಅನಂತ ಪದ್ಮನಾಭರಾವ್, ಡಾ.ಶಿವಕುಮಾರ್, ಲೋಲಾಕ್ಷಮ್ಮ, ರಂಗಶೆಟ್ಟಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.