ADVERTISEMENT

ಸಿಇಟಿ ಹೊಸ ಕಾಯ್ದೆಗೆ ಎಬಿವಿಪಿ ವಿರೋಧ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2013, 10:07 IST
Last Updated 21 ಡಿಸೆಂಬರ್ 2013, 10:07 IST

ಚಿತ್ರದುರ್ಗ: ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ‘ವೃತ್ತಿ
ಶಿಕ್ಷಣ ಪ್ರವೇಶ ೨೦೦೬ರ’ ಕಾಯ್ದೆ ಅನುಷ್ಠಾನ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಈ ಕಾಯ್ದೆಯಿಂದ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಆಗುವುದಿಲ್ಲ
ಎಂದು ಆರೋಪಿಸಿದ ಕಾರ್ಯಕರ್ತರು, ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ಕ್ರಮವನ್ನು ಖಂಡಿಸಿ ಕಾರ್ಯಕರ್ತರು ಸರ್ಕಾರದ ಪ್ರತಿಕೃತಿ ದಹನಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಯಾವುದೇ ಖಾಸಗಿ ಅನುದಾನರಹಿತ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಯಾವುದೇ ಸೀಟ್ ಗಳು ಈ ಕಾಯ್ದೆಯಲ್ಲಿ ಇಲ್ಲ. ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಮೆಡ್–ಕೆ ನಡೆಸುವ ಪರೀಕ್ಷೆಗಳನ್ನು ಬರೆಯಬೇಕಾಗುತ್ತದೆ. ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವ ಕಾಮೆಡ್–ಕೆ ಪರೀಕ್ಷೆ ನಡೆಸುವ ಅಧಿಕಾರ ನೀಡಲಾಗಿದ್ದು ಇದರಿಂದ ಪರೀಕ್ಷಾ ವ್ಯವಸ್ಥೆಯೆ ಹದಗೆಟ್ಟಿದೆ ಎಂದು ಆರೋಪಿಸಿದರು.

ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಜಿ.ಎಂ.ಪವನ್, ಯುವರಾಜು, ಧರಣಿಕುಮಾರ್, ನವೀನ್, ಪ್ರಜ್ವಲ್, ರುದ್ರಮುನಿ, ಚಂದ್ರು, ದೇವರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.