ADVERTISEMENT

ಹೆಚ್ಚುತ್ತಿರುವ ಲಿಂಗ ಅಸಮಾನತೆ; ಆತಂಕ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 9:50 IST
Last Updated 4 ಫೆಬ್ರುವರಿ 2011, 9:50 IST


 
ಮೊಳಕಾಲ್ಮುರು: ಜಾಗತಿಕ ದಿನಗಳಲ್ಲಿಯೂ ಲಿಂಗ ಅಸಮಾನತೆ ಹೆಚ್ಚಳವಾಗುತ್ತಿರುವುದು ವಿಷಾದಕರ ಸಂಗತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟ ಶಿವಾರೆಡ್ಡಿ ಆತಂಕ ವ್ಯಕ್ತಪಡಿಸಿದರು.ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಯೋಜನಾ ನಿರ್ವಹಣಾ ಘಟಕ ಸಂಯುಕ್ತವಾಗಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಅಡಿಯಲ್ಲಿ ‘ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವಿಕೆ’ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ನಂಬಿಕೆ ಒತ್ತು ನೀಡಿದ್ದು. ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸಲು ಸಂಘ, ಸಂಸ್ಥೆಗಳು ಮತ್ತು ಸ್ವಯಂಸೇವಕರು, ಹೊಣೆ ಹೊತ್ತ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು

ಪ್ರಸ್ತುತ  ರಾಜ್ಯದಲ್ಲಿ ಸರಾಸರಿ 1,000 ಪುರುಷರಿಗೆ 947 ಮಹಿಳೆಯರು ಇದ್ದಾರೆ. ಶೇ. 53ರಷ್ಟು ಕೊರತೆ ಇದೆ. ಇದಕ್ಕೆ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಗಂಡು ಸಂತತಿ ಇಚ್ಛೆ .
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಜಿಲ್ಲಾ ಅಧಿಕಾರಿ ಡಾ.ಶಿವಕುಮಾರ್ ಮಾತನಾಡಿ, ಆರೋಗ್ಯ ಇಲಾಖೆ ನೂತನವಾಗಿ ಎಂಟಿಎಸ್ ತಂತ್ರಾಂಶ ಅಳವಡಿಸಿದ್ದು, ಇದರಲ್ಲಿ ಮೊಬೈಲ್ ಮೂಲಕ ಗರ್ಭಿಣಿ ಮತ್ತು ಮಗುವಿನ ಆರೋಗ್ಯಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ತಕ್ಷಣವೇ ತಿಳಿಯಲು ಸಾಧ್ಯವಾಗಲಿದೆ ಎಂದು ಹೇಳಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಪದ್ಮಾವತಿ, ಡಾ. ಶಿವಕುಮಾರ್, ಡಾ. ಮಲ್ಲಪ್ಪ, ಡಾ. ಕೃಷ್ಣಕಿಶೋರ್, ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಡಾ. ಸುಧಾ, ಹೆಲ್ಪ್ ಸಂಸ್ಥೆಯ ಪಿ. ಮಲ್ಲಿಕಾರ್ಜುನ್, ‘ಮೈರಾಡ’ ಸಂಸ್ಥೆಯ ವಿಶ್ವನಾಥ್, ‘ಆಶಾ’ ಮೇಲ್ವಿಚಾರಕಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.