ADVERTISEMENT

ಕೋವಿಡ್: 348 ಜನ ಗುಣಮುಖ

219 ಜನರಿಗೆ ಕೋವಿಡ್ ದೃಢ * ಸೋಂಕಿತರ ಸಂಖ್ಯೆ 5,816ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 16:27 IST
Last Updated 19 ಸೆಪ್ಟೆಂಬರ್ 2020, 16:27 IST

ಚಿತ್ರದುರ್ಗ: ಜಿಲ್ಲೆಯಲ್ಲಿ 219 ಜನರಿಗೆ ಕೊರೊನಾ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್-19 ರೋಗಿಗಳ ಸಂಖ್ಯೆ 5,816ಕ್ಕೆ ಏರಿಕೆಯಾಗಿದೆ. ಹಲವೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 348 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಒಟ್ಟು 829 ಜನರ ಗಂಟಲು, ಮೂಗಿನ ದ್ರವದ ಮಾದರಿ ಸಂಗ್ರಹಿಸಲಾಗಿದೆ.ಚಿತ್ರದುರ್ಗ 136, ಹಿರಿಯೂರು 5, ಚಳ್ಳಕೆರೆ 38, ಹೊಸದುರ್ಗ 8, ಮೊಳಕಾಲ್ಮುರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ತಲಾ 16 ಸೇರಿ 219 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಸೋಂಕಿತರ ಪೈಕಿ ಈಗಾಗಲೇ 4,409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,372 ಸಕ್ರಿಯ ಪ್ರಕರಣಗಳಿವೆ.ಜಿಲ್ಲೆಯಲ್ಲಿ ಒಟ್ಟು 1,396 ಕಂಟೈನ್‌ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 38,759 ಜನ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ADVERTISEMENT

ಈವರೆಗೆ 54,278 ಜನರ ಮಾದರಿ ಸಂಗ್ರಹಿಸಲಾಗಿದ್ದು, 46,298 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.