ADVERTISEMENT

ಚಿತ್ರದುರ್ಗ | 125 ಜನರಿಗೆ ಕೋವಿಡ್ ದೃಢ

ಸೋಂಕಿತರ ಸಂಖ್ಯೆ 2,331ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2020, 16:20 IST
Last Updated 27 ಆಗಸ್ಟ್ 2020, 16:20 IST
   

ಚಿತ್ರದುರ್ಗ: ಜಿಲ್ಲೆಯಲ್ಲಿ 125 ಜನರಿಗೆ ಕೊರೊನಾ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್-19 ರೋಗಿಗಳ ಸಂಖ್ಯೆ 2,331ಕ್ಕೆ ಏರಿಕೆಯಾಗಿದೆ.

ಒಟ್ಟು 765 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ.ಚಿತ್ರದುರ್ಗ 24, ಹಿರಿಯೂರು 47, ಚಳ್ಳಕೆರೆ 27, ಹೊಸದುರ್ಗ 5, ಮೊಳಕಾಲ್ಮುರು 20 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 2 ಸೇರಿ 125 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಪೈಕಿ ಈಗಾಗಲೇ 1,562 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 734 ಸಕ್ರಿಯ ಪ್ರಕರಣಗಳಿವೆ.ಒಟ್ಟು 562 ಕಂಟೈನ್‌ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 16,696 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ADVERTISEMENT

ಈವರೆಗೆ 35,774 ಜನರ ಮಾದರಿ ಸಂಗ್ರಹಿಸಲಾಗಿದ್ದು, 32,344 ಜನರ ವರದಿ ನೆಗೆಟಿವ್ ಬಂದಿದೆ. 681 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.