ADVERTISEMENT

ರಾಂಪುರ: 14.5 ಟನ್ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 14:10 IST
Last Updated 6 ನವೆಂಬರ್ 2019, 14:10 IST
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ ಮಂಗಳವಾರ ಅಕ್ರಮ ಸಾಕಣೆ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡರು.
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ ಮಂಗಳವಾರ ಅಕ್ರಮ ಸಾಕಣೆ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡರು.   

ಮೊಳಕಾಲ್ಮುರು: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 14.5 ಟನ್ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ತಾಲ್ಲೂಕಿನ ರಾಂಪುರ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಎಸ್ಐ ಗುಡ್ಡಪ್ಪ ನೇತೃತ್ವದ ತಂಡ ಬೆಂಗಳೂರು- ಬಳ್ಳಾರಿ ರಾಜ್ಯಹೆದ್ದಾರಿಯಲ್ಲಿ ತನಿಖೆ ನಡೆಸಿದಾಗ ಅಕ್ರಮ ಸಾಗಣೆ ಬೆಳಕಿಗೆ ಬಂದಿದೆ.

ಸಾಗಣೆ ಮಾಡುತ್ತಿದ್ದ ಲಾರಿ ರಾಂಪುರದ ವೀರಭದ್ರೇಶ್ವರ ಟ್ರೇಡರ್ಸ್ ಮಾಲೀಕ ಚಂದ್ರಶೇಖರ್ ಅವರಿಗೆ ಸೇರಿದ್ದು ಎನ್ನಲಾಗಿದೆ. ತಾಲ್ಲೂಕು ಆಹಾರ ಶೀರಸ್ತೇದಾರ ಉದಯಕುಮಾರ್ ಈ ಕುರಿತು ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.