ADVERTISEMENT

ಚಿತ್ರದುರ್ಗ: 180 ಜನರು ಚೇತರಿಕೆ; 38 ಜನರಿಗೆ ಕೊರೊನಾ

ಕೋವಿಡ್ ಸೋಂಕಿತರ ಸಂಖ್ಯೆ 12,342ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 1:42 IST
Last Updated 1 ನವೆಂಬರ್ 2020, 1:42 IST

ಚಿತ್ರದುರ್ಗ: ಜಿಲ್ಲೆಯ 38 ಜನರಿಗೆ ಕೊರೊನಾ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್-19 ರೋಗಿಗಳ ಸಂಖ್ಯೆ 12,342ಕ್ಕೆ ಏರಿಕೆಯಾಗಿದೆ. ಹಲವೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 180 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಒಟ್ಟು 1,508 ಜನರ ಗಂಟಲು, ಮೂಗಿನ ದ್ರವದ ಮಾದರಿ ಸಂಗ್ರಹಿಸಲಾಗಿದೆ.ಇದರಲ್ಲಿ 38 ಜನರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಸೋಂಕಿತರ ಪೈಕಿ ಈಗಾಗಲೇ 11,700 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ 59 ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 94,900 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,09,465 ಜನರ ಮಾದರಿ ಸಂಗ್ರಹಿಸಲಾಗಿದ್ದು, 96,174 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ತುಳಸಿ ರಂಗನಾಥ್ ತಿಳಿಸಿದ್ದಾರೆ.

ADVERTISEMENT

***

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಗುಣಮುಖ ಸಾವು

12,342 - 582 -11,700- 59

ಈ ದಿನದ ಏರಿಕೆ

38- 00-180-00

ಆಧಾರ- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.