ADVERTISEMENT

ಚಿತ್ರದುರ್ಗದಲ್ಲಿ 21 ಮಂದಿಗೆ ಕಪ್ಪು ಶಿಲೀಂಧ್ರ ರೋಗ

​ಪ್ರಜಾವಾಣಿ ವಾರ್ತೆ
Published 22 ಮೇ 2021, 1:19 IST
Last Updated 22 ಮೇ 2021, 1:19 IST
ಕಪ್ಪು ಶಿಲೀಂದ್ರ ರೋಗಕ್ಕೆ ಗುರಿಯಾದ ವ್ಯಕ್ತಿಯೊಬ್ಬರ ವೈದ್ಯಕೀಯ ವರದಿ ಪರಿಶೀಲಿಸುತ್ತಿರುವ ವೈದ್ಯರು (ಪಿಟಿಐ)
ಕಪ್ಪು ಶಿಲೀಂದ್ರ ರೋಗಕ್ಕೆ ಗುರಿಯಾದ ವ್ಯಕ್ತಿಯೊಬ್ಬರ ವೈದ್ಯಕೀಯ ವರದಿ ಪರಿಶೀಲಿಸುತ್ತಿರುವ ವೈದ್ಯರು (ಪಿಟಿಐ)   

ಚಿತ್ರದುರ್ಗ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣ ದಾಂಗುಡಿ ಇಟ್ಟಿದ್ದು, ಈವರೆಗೆ ಒಟ್ಟು 21 ಪ್ರಕರಣಗಳು ಪತ್ತೆಯಾಗಿವೆ. ಡಾ.ಪ್ರಹ್ಲಾದ್‌ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿದೆ.

ಕಪ್ಪು ಶಿಲೀಂಧ್ರ ಕಾಣಿಸಿಕೊಂಡ ಬಹುತೇಕರು ಕೋವಿಡ್‌ಗೆ ಚಿಕಿತ್ಸೆ ಪಡೆದವರು. ತೀವ್ರ ಮಧುಮೇಹದಿಂದ ಬಳಲುತ್ತಿದ್ದ ರೋಗಿಗಳನ್ನು ಇದು ಬಾಧಿಸಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಚಳ್ಳಕೆರೆ ರಸ್ತೆಯಲ್ಲಿರುವ ಡಾ.ಪ್ರಹ್ಲಾದ್‌ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

‘ಕಪ್ಪು ಶಿಲೀಂಧ್ರ ಪ್ರಕರಣ ಸಾಂಕ್ರಾಮಿಕವಲ್ಲ. ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದಿಲ್ಲ. ಸಾರ್ವಜನಿಕರು ಗಾಬರಿ ಆಗುವ ಅಗತ್ಯವಿಲ್ಲ. ಈ ರೋಗಿಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸು
ತ್ತಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿ.ಎಲ್‌. ಫಾಲಾಕ್ಷ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.