ADVERTISEMENT

26ಕ್ಕೆ ಪಟ್ಟಸಾಲೆ ಜನಾಂಗದ ಸಮಾವೇಶ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 9:00 IST
Last Updated 17 ಆಗಸ್ಟ್ 2012, 9:00 IST

ಮೊಳಕಾಲ್ಮುರು: ಪಟ್ಟಸಾಲೆ ಜನಾಂಗದ ಸಂಘಟನೆ ಮತ್ತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಆ. 26ರಂದು ಚಳ್ಳಕೆರೆ ತಾಲ್ಲೂಕಿನ ತೊರೆಕೋಲಮ್ಮನ ಹಳ್ಳಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಘಟಕದ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ ಹೇಳಿದರು.

ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಬುಧವಾರ ನಡೆದ  ಸಭೆಯಲ್ಲಿ ಅವರು ಮಾತನಾಡಿದರು.

ಜನಾಂಗ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪರಿಣಾಮ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ್, ಶಾಸಕ ಗೋಪಾಲಕೃಷ್ಣ ಭಾಗವಹಿಸಲಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು.

ಆ. 20ರಂದು ಚಿತ್ರದುರ್ಗದಲ್ಲಿ ಪಟ್ಟಸಾಲೆ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ಸಮಾಜದ ಅಧ್ಯಕ್ಷ ಡಿ. ಷಡಾಕ್ಷರಪ್ಪ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಸಂಘದ ಕಾರ್ಯದರ್ಶಿ ಶಶಿಧರ್, ಸಂಘಟನಾ ಕಾರ್ಯದರ್ಶಿ ಕೋಲಂನಹಳ್ಳಿ ಪೀತಾಂಬರ್, ಉಪಾಧ್ಯಕ್ಷ ಮಲ್ಲಿಕಾರ್ಜುನಪ್ಪ, ಗಿರೀಶ್‌ಬಾಬು, ನರಸಿಂಹರಾಜು, ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ, ತಿಮ್ಮರಾಜ್, ಪಿ.ಟಿ. ಮಾಸ್ತರ್, ಆರ್.ಕೆ. ತಿಪ್ಪೇಸ್ವಾಮಿ, ಪಿ. ಗೊಪಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.