ADVERTISEMENT

ಚಿತ್ರದುರ್ಗ: 353 ಜನರಿಗೆ ಕೋವಿಡ್ ದೃಢ, 246 ಜನ ಗುಣಮುಖ

, ಸೋಂಕಿತರು 6,423ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 2:50 IST
Last Updated 22 ಸೆಪ್ಟೆಂಬರ್ 2020, 2:50 IST

ಚಿತ್ರದುರ್ಗ: ಜಿಲ್ಲೆಯಲ್ಲಿ 353 ಜನರಿಗೆ ಕೊರೊನಾ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್-19 ರೋಗಿಗಳ ಸಂಖ್ಯೆ 6,423ಕ್ಕೆ ಏರಿಕೆಯಾಗಿದೆ. ಹಲವೆಡೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 246 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಒಟ್ಟು 376 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ.ಚಿತ್ರದುರ್ಗ 180, ಹಿರಿಯೂರು 4, ಚಳ್ಳಕೆರೆ 69, ಹೊಸದುರ್ಗ 40, ಮೊಳಕಾಲ್ಮುರು 9, ಹೊಳಲ್ಕೆರೆ ತಾಲ್ಲೂಕಿನಲ್ಲಿ 51 ಸೇರಿ 353 ಜನರಿಗೆ ಕೊರೊನಾ ಸೋಂಕು ಇರುವುದು
ಖಚಿತವಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಪೈಕಿ ಈಗಾಗಲೇ 5,076 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ADVERTISEMENT

1,264 ಸಕ್ರಿಯ ಪ್ರಕರಣಗಳಿವೆ. ಒಟ್ಟು 2,816 ಕಂಟೈನ್‌ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 39,803 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 55,520 ಜನರ ಮಾದರಿ ಸಂಗ್ರಹಿಸಲಾಗಿದ್ದು, 48,016 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.