ADVERTISEMENT

‘44 ಹಳ್ಳಿಗಳಿಗೆ ಪೈಪ್‌ಲೈನ್ ಮೂಲಕ ನೀರು’

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2018, 10:05 IST
Last Updated 27 ಫೆಬ್ರುವರಿ 2018, 10:05 IST

ಹಿರಿಯೂರು: ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಒಳಗೊಂಡಂತೆ 44 ಹಳ್ಳಿಗಳಿಗೆ ₹ 20 ಕೋಟಿ ವೆಚ್ಚದಲ್ಲಿ ಗಾಯತ್ರಿ ಜಲಾಶಯದಿಂದ ಪೈಪ್‌ಲೈನ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಸಿ.ಬಿ. ಪಾಪಣ್ಣ ಹೇಳಿದರು.

ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ದಿಂಡಾವರ ಗ್ರಾಮದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ನಂತರ ಅವರು ಮಾತನಾಡಿದರು.

ಇದುವರೆಗೂ ಆಡಳಿತ ನಡೆಸಿದವರು ಕಲ್ಲುವಳ್ಳಿ ಪ್ರದೇಶವನ್ನು ನಿರ್ಲಕ್ಷಿಸಿದ್ದರು. ಕುಡಿಯುವ ನೀರು, ಉದ್ಯೋಗ ಸಿಗದೆ ಬಹಳಷ್ಟು ಹಳ್ಳಿಗಳಲ್ಲಿ ಜನ ಗುಳೇ ಹೋಗುತ್ತಿದ್ದರು. ಶಾಸಕ ಸುಧಾಕರ್ ಪ್ರಯತ್ನದ ಫಲವಾಗಿ ಭದ್ರಾ ಮೇಲ್ದಂಡೆ ತುಮಕೂರು ನಾಲಾ ಯೋಜನೆಯಲ್ಲಿ ಗಾಯತ್ರಿ ಜಲಾಶಯಕ್ಕೆ ನೀರು ಹರಿದು ಬರಲಿದೆ.

ADVERTISEMENT

ಹೋಬಳಿಯ ಬಹುತೇಕ ಪ್ರದೇಶ ನೀರಾವರಿಗೆ ಒಳಪಡಲಿದೆ. ಈ ಭಾಗದಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿ ಕಾರ್ಯಗಳು ಕಳೆದ ಒಂಬತ್ತು ವರ್ಷದಲ್ಲಿ ನಡೆದಿವೆ ಎಂದರು. ವಕೀಲ ಮಹೇಶ್, ಪ್ರಗತಿಪರ ರೈತ ಸುರೇಶ್ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.