ADVERTISEMENT

ಉಗ್ರಗಾಮಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 8:29 IST
Last Updated 13 ಜನವರಿ 2018, 8:29 IST

ಚಿತ್ರದುರ್ಗ:  ಆರ್‍ಎಸ್ಎಸ್, ಬಜರಂಗದಳ, ಬಿಜೆಪಿಯವರು ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸಿ.ಎಂ ಮತ್ತು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜೈಲ್ ಭರೋ ಚಳವಳಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

'ನಾನೂ ಉಗ್ರ–ನನ್ನನ್ನೂ ಬಂಧಿಸಿ' ಎಂದು ಘೋಷಣೆ ಕೂಗುತ್ತ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ಮುಂಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ ಗಳನ್ನು ದಾಟಿ ಕಚೇರಿಯೊಳಗೆ ನುಗ್ಗಲು ಪ್ರಯತ್ನಿಸಿದರು. ಅದರಲ್ಲೂ ಮಹಿಳಾ ಕಾರ್ಯಕರ್ತೆಯರದ್ದೇ ಮೇಲುಗೈಯಾಗಿತ್ತು.

ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಇದೇ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟದ ಜತೆಗೆ ಎರಡೂ
ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು.

ADVERTISEMENT

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ಮಾತನಾಡಿ, ‘ದೇಶಭಕ್ತ ಸಂಘಟನೆಗಳ ಕಾರ್ಯಕರ್ತರ ಬಗ್ಗೆ ಉಗ್ರಗಾಮಿಗಳು ಎಂದು ಕೀಳಾಗಿ ದೂಷಿಸುವುದಾದರೆ, ನಮ್ಮೆಲ್ಲರನ್ನೂ ಬಂಧಿಸಿ‘ ಎಂದು ಸವಾಲು ಹಾಕಿದರು.

‘ಮುಖ್ಯಮಂತ್ರಿ ಯಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ರಾಷ್ಟ್ರೀಯ ಪಕ್ಷದ ವಿರುದ್ಧ ಗುರುತರ ಆರೋಪ ಮಾಡುವ ಮೊದಲು ತಾವೇನು ಮಾತನಾಡುತ್ತಿದ್ದೇವೆ ಎಂಬ ವಿವೇಚನೆ ಇಟ್ಟುಕೊಳ್ಳುವುದು ಅಗತ್ಯ. ನಿಜವಾಗಿಯೂ ಉಗ್ರಗಾಮಿ ಕೃತ್ಯಗಳಲ್ಲಿ ತೊಡಗಿರುವ ಪಿಎಫ್ಐ, ಕೆಎಫ್‌ಡಿಯಂತಹ ಸಂಘಟನೆಗಳನ್ನು ಮತಕ್ಕಾಗಿ ಒಲೈಸಿಕೊಳ್ಳುವ ಭರದಲ್ಲಿ ಬಿಜೆಪಿಯಂತಹ ರಾಷ್ಟ್ರವಾದಿ ಪಕ್ಷವನ್ನು ಉಗ್ರಗಾಮಿ ಸಂಘಟನೆಗೆ ಹೋಲಿಸಿರುವುದು ಅಕ್ಷಮ್ಯ’ ಎಂದು ತಿರುಗೇಟು ನೀಡಿದರು.

ಸಭೆ, ಸಮಾರಂಭಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಆರೋಪ-ಪ್ರತ್ಯಾರೋಪ ಮಾಡುವುದು ಸಾಮಾನ್ಯ. ಆದರೆ, ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ ಎಂದು ಇಲ್ಲಸಲ್ಲದ ಹೇಳಿಕೆ ನೀಡಿ ತಮ್ಮ ಗೌರವ ತಾವೇ ಹಾಳು ಮಾಡಿಕೊಳ್ಳಲು ಸಿ.ಎಂ ಹೊರಟಂತೆ ಕಾಣುತ್ತಿದೆ. ಮೊದಲು ಹೇಳಿಕೆ ಕೊಟ್ಟು ನಂತರ ಅದಕ್ಕೆ ಸ್ಪಷ್ಟನೆ ನೀಡುವುದನ್ನು ಸಿದ್ದರಾಮಯ್ಯ  ಕಲಿತಿ ದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ನರೇಂದ್ರನಾಥ್ ಮಾತನಾಡಿ,  ‘ಜಿಲ್ಲೆಗಳನ್ನು ಅಭಿವೃದ್ಧಿ ಮಾಡುವುದನ್ನು ಬಿಟ್ಟು ಅನಗತ್ಯ ಹೇಳಿಕೆ ನೀಡುವುದರಲ್ಲೇ ಸಿ.ಎಂ ಕಾಲ ಕಳೆಯುತ್ತಿದ್ದಾರೆ. ಅಲ್ಲದೇ, ಅವರ ಜತೆ ದಿನೇಶ್ ಗುಂಡೂರಾವ್ ಕೈಜೋಡಿ ಸಿದ್ದಾರೆ. ಕೂಡಲೇ ಹೇಳಿಕೆ ಹಿಂಪಡೆದು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡರಾದ ಜಿ.ಎಂ.ಸುರೇಶ್, ಮಲ್ಲಿಕಾರ್ಜುನ್, ಮುರಳಿ, ರತ್ನಮ್ಮ, ವೆಂಟಕಸ್ವಾಮಿ, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ತಿಪ್ಪೇಸ್ವಾಮಿ, ನರೇಂದ್ರ, ಲೀಲಾಧರ್ ಠಾಕೂರ್, ಸಂಪತ್ ಕುಮಾರ್, ರೇವಣಸಿದ್ದಪ್ಪ, ಸುರೇಶ್ ಸಿದ್ದಾಪುರ, ಶಿವಣ್ಣಾಚಾರಿ, ಬಸಮ್ಮ, ಚಂದ್ರಿಕಾ, ವೆಂಕಟೇಶ್ ಯಾದವ್, ಕಮಲೇಶ್ ಜೈನ್, ಡಿ.ರಮೇಶ್, ರೇಖಾ, ಅಭಿಲಾಷ್, ಶಂಭು ಇದ್ದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.