ADVERTISEMENT

ಜಿಲ್ಲೆಯಲ್ಲಿ 65,569 ಜನರಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 4:00 IST
Last Updated 18 ಸೆಪ್ಟೆಂಬರ್ 2021, 4:00 IST
ಚಿತ್ರದುರ್ಗದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಶುಕ್ರವಾರ ಸ್ಥಾಪಿಸಿದ್ದ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಚಾಲನೆ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ್‌, ಕಾರ್ಯಪಾಲಕ ಎಂಜಿನಿಯರ್‌ ಸತೀಶ್ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್‌, ನೌಕರರ ಸಂಘದ ಪ್ರದೀಪ್ ಕುಮಾರ್, ವೀರೇಶ್, ಶ್ರೀನಿವಾಸ್ ಇದ್ದಾರೆ.

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಕೋವಿಡ್‌ ಲಸಿಕಾ ಮಹಾಮೇಳದಲ್ಲಿ ಸುಮಾರು 65,569 ಜನರು ಲಸಿಕೆ ಪಡೆದಿದ್ದಾರೆ. ಜಿಲ್ಲೆಯ 352 ಕೇಂದ್ರಗಳಲ್ಲಿ ಏಕಕಾಲಕ್ಕೆ ಲಸಿಕೆ ನೀಡಲಾಗಿದೆ.

ಒಂದೇ ದಿನ 70 ಸಾವಿರ ಜನರಿಗೆ ಲಸಿಕೆ ನೀಡಬೇಕು ಎಂಬ ಗುರಿ ಹೊಂದಲಾಗಿತ್ತು. ಇದಕ್ಕೆ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿತ್ತು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಲಸಿಕೆ ನೀಡಲು ಶ್ರಮಿಸಿದರು. ಪ್ರತಿ ಕೇಂದ್ರಕ್ಕೆ ಮೂವರು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಬೆಳಿಗ್ಗೆ 8ರಿಂದ ಸಂಜೆ 6 ರವರೆಗೆ ಲಸಿಕೆ ನೀಡಲಾಯಿತು.

ಅಂಗನವಾಡಿ ಕೇಂದ್ರ, ಸಮುದಾಯ ಭವನ, ಛತ್ರ, ಕಲ್ಯಾಣ ಮಂಟಪ ಹೀಗೆ ಹಲವೆಡೆ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಸಂಘ–ಸಂಸ್ಥೆ, ಸರ್ಕಾರೇತರ ಸೇವಾ ಸಂಸ್ಥೆಗಳು ಆರೋಗ್ಯ ಇಲಾಖೆಗೆ ಕೈಜೋಡಿಸಿದ್ದವು. ಲಸಿಕೆ ಪಡೆಯಲು ಹಲವೆಡೆ ಸರತಿ ಸಾಲುಗಳು ಕಂಡುಬಂದವು. ಮೊದಲ ಹಾಗೂ ಎರಡನೇ ಡೋಸ್‌ ಲಸಿಕೆಯನ್ನು ಜನರು ಪಡೆದರು. ಇದರ ಯಶಸ್ಸಿಗೆ 13 ಸಂಚಾರಿ ತಂಡಗಳು
ಶ್ರಮಿಸಿದವು.

ADVERTISEMENT

ಜಿಲ್ಲೆಯಲ್ಲಿ ಈವರೆಗೆ 12,30,319 ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ. ಇದರಲ್ಲಿ 8,20,078 ಮೊದಲ ಡೋಸ್‌ ಹಾಗೂ 4,10,241 ಜನರು ಎರಡನೇ ಡೋಸ್‌ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.