ಹಿರಿಯೂರು (ಚಿತ್ರದುರ್ಗ): ಹಿರಿಯೂರು-ಹುಳಿಯಾರು ರಸ್ತೆಯಲ್ಲಿ ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ತಮಿಳುನಾಡು ಹಾಗೂ ಕರ್ನಾಟಕ ನೋಂದಣಿ ಲಾರಿಗಳ ನಡುವೆ ಈ ಅಪಘಾತ ಸಂಭವಿಸಿದೆ.
ಹಿರಿಯೂರಿನಿಂದ ಹುಳಿಯಾರು ಕಡೆಗೆ ಹೊರಟಿದ್ದ ಲಾರಿ ಹಾಗೂ ಹುಳಿಯಾರು ಕಡೆಯಿಂದ ಹಿರಿಯೂರಿಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.