ADVERTISEMENT

ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ: ಬೊಮ್ಮಾಯಿ, ಬಿಎಸ್‌ವೈಗೆ ನಿಯೋಗದ ಮನವಿ

ಸಿಎಂ ಬೊಮ್ಮಾಯಿ, ಬಿಎಸ್‌ವೈ ಭೇಟಿಯಾದ ನಿಯೋಗ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 15:49 IST
Last Updated 14 ಅಕ್ಟೋಬರ್ 2022, 15:49 IST
   

ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.

ಮಾಜಿ ಸಚಿವ ಎಚ್‌.ಏಕಾಂತಯ್ಯ, ವಿಧಾನಪರಿಷತ್‌ ಸದಸ್ಯ ಕೆ.ಎಸ್‌.ನವೀನ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜನರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದೆ. ಶಾಸಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದೆ.

‘ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಮುರುಘಾ ಮಠದ ದೈನಂದಿನ ಧಾರ್ಮಿಕ ಕೈಂಕರ್ಯ ಹಾಗೂ ಆಡಳಿತಾತ್ಮಕ ಚಟುವಟಿಕೆಗೆ ತೊಂದರೆ ಆಗುತ್ತಿದೆ. ಮುರುಘರಾಜೇಂದ್ರ ಪೀಠದ ಉಳಿವಿಗೆ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕ ಮಾಡಬೇಕು ಎಂಬ ಮನವಿ ಮಾಡಲಾಗಿದೆ’ ಎಂದು ಸಮುದಾಯದ ಮುಖಂಡ ಎಸ್‌.ಷಣ್ಮುಖಪ್ಪ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.