ತಿರುಮಲ
ಮೊಳಕಾಲ್ಮುರು: ಮದುವೆ ಆಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಾಗೀರ ಬುಡ್ಡೇನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಬುಡ್ಡೇನಹಳ್ಳಿ ಗ್ರಾಮದ ತಿರುಮಲ (28) ಆತ್ಮಹತ್ಯೆ ಮಾಡಿಕೊಂಡವರು. ಇವರು ರಾಂಪುರ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಮನೆಯಲ್ಲಿ ರಾತ್ರಿ ಊಟ ಮುಗಿಸಿ ಕೊಠಡಿಯಲ್ಲಿ ಮಲಗಲು ಹೋಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‘ಮದುವೆ ಆಗಲು ಹೆಣ್ಣು ಸಿಗಲಿಲ್ಲ, ವಿಳಂಬವಾಗುತ್ತಿದೆ ಎಂದು ತಿರುಮಲ ತೀವ್ರವಾಗಿ ಮನಸ್ಸಿಗೆ ಹಚ್ಚಿಕೊಂಡಿದ್ದರು. ಈ ಬಗ್ಗೆ ಮನೆಯಲ್ಲಿ ಸಾಕಷ್ಟು ಸಲ ಚರ್ಚೆ ಮಾಡಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪಾಲಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.