ಚಿತ್ರದುರ್ಗ: ಡಾನ್ ಬಾಸ್ಕೋ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿಸ್ಥತರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಆಗ್ರಹಿಸಿದೆ.
ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಮೊದಲು ರಕ್ಷಣೆ ನೀಡಿ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ವಿಭಾಗ ಸಹ ಸಂಚಾಲಕ ಗೋಪಿ, ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಚಂದನ, ಮನೋಜ್, ಸಾಮಾಜಿಕ ಜಾಲತಾಣ ಪ್ರಮುಖ್ ಆದರ್ಶ ಮಾರನಬಸರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.