ADVERTISEMENT

ಚಳ್ಳಕೆರೆ | ಅಪಘಾತ: ಲಾರಿ ಚಾಲಕ ಸಾವು,  ಹೊತ್ತಿ ಉರಿದ ವೋಲ್ವೊ ಬಸ್

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2019, 4:39 IST
Last Updated 27 ಅಕ್ಟೋಬರ್ 2019, 4:39 IST
ಚಳ್ಳಕೆರೆ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್‌ನ ಬೆಂಕಿಯನ್ನು ಅಗ್ನಿಶಾಮಕದ ದಳದ ಸಿಬ್ಬಂದಿ ನಂದಿಸಿದರು.
ಚಳ್ಳಕೆರೆ ಸಮೀಪ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್‌ನ ಬೆಂಕಿಯನ್ನು ಅಗ್ನಿಶಾಮಕದ ದಳದ ಸಿಬ್ಬಂದಿ ನಂದಿಸಿದರು.   

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಪಿಲೆಹಟ್ಟಿ ಸಮೀಪ ಲಾರಿ ಮತ್ತು ವೋಲ್ವೊ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಮೃತಪಟ್ಟಿದ್ದಾರೆ. ಅಪಘಾತದ ನಂತರ ಬಸ್ ಹೊತ್ತಿ ಉರಿದಿದ್ದು, ಸ್ವಲ್ಪದರಲ್ಲಿ ಭಾರಿ ದುರಂತ ತಪ್ಪಿದೆ.

ಲಾರಿ ಚಾಲಕ ವೆಂಕಟೇಶ್ (40) ಮೃತಪಟ್ಟವರು. ವೋಲ್ವೊ ಬಸ್‌ನಲ್ಲಿ ಇದ್ದ 15 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಬೆಂಗಳೂರಿನಿಂದ ಚಳ್ಳಕೆರೆಗೆ, ಲಾರಿ ಬಳ್ಳಾರಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.