ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಚೀರನಹಳ್ಳಿ ಗೇಟ್ ಬಳಿ ವಾಹನವೊಂದು ಡಿಕ್ಕಿ ಹೊಡೆದು ಪೊಲೀಸ್ ಕಾನ್ ಸ್ಟೆಬಲ್ ಕೆ.ಕೆ.ಆನಂದ್ (33) ಎಂಬುವರು ಮೃತಪಟ್ಟಿದ್ದಾರೆ.
ಕೊಡಗವಳ್ಳಿ ನಿವಾಸಿ ಆನಂದ್ ಅವರು ಶನಿವಾರ ತಡ ರಾತ್ರಿ ಚೀರನಹಳ್ಳಿ ಗೇಟ್ ಸಮೀಪ ನಿಂತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಪತ್ತೆಯಾಗಿಲ್ಲ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.