ADVERTISEMENT

ಚಳ್ಳಕೆರೆ | ಲಾರಿ - ಟಿಪ್ಪರ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 3:38 IST
Last Updated 4 ನವೆಂಬರ್ 2019, 3:38 IST
   

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಬಳಿ ಲಾರಿ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಲಾರಿ ಚಾಲಕ ಶಿವರಾಜ್ (35) ಮತ್ತು ಟಿಪ್ಪರ್ ಚಾಲಕ ಸುರೇಂದ್ರ (50) ಮೃತಪಟ್ಟವರು. ಲಾರಿಯಲ್ಲಿದ್ದ ಮೂವರು ಗಾಯಗೊಂಡಿದ್ದು , ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೋಮವಾರ ನಸುಕಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಳುಕು ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.