ಧರ್ಮಪುರ ಸಮೀಪದ ರಂಗೇನಹಳ್ಳಿ ಭಗವತೀ ಆಂಜನೇಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನಿ ಓಂಕಾರಪ್ಪ ಮಾತನಾಡಿದರು.
ಧರ್ಮಪುರ: ‘ಮಿತಿಮೀರಿದ ಕೀಟನಾಶಕಗಳ ಬಳಕೆಯಿಂದ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಕೀಟ ನಾಶಕಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಿ’ ಎಂದು ಬಬ್ಬೂರು ಕೃಷಿ ವಿಜ್ಞಾನಿ ಓಂಕಾರಪ್ಪ ಸಲಹೆ ನೀಡಿದರು.
ಸಮೀಪದ ರಂಗೇನಹಳ್ಳಿಯ ಭಗವತೀ ಆಂಜನೇಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೃಷಿ ಇಲಾಖೆ ಬುಧವಾರ ಹಮ್ಮಿಕೊಂಡಿದ್ದ ನೇಗಿಲಯೋಗಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕೃಷಿ ಇಲಾಖೆಯಿಂದ ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ಲಘು ಪೋಷಕಾಂಶಗಳು ಮತ್ತು ಕೃಷಿ ಉಪಕರಣಗಳು ದೊರೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದರು.
’ರೈತರು ತಮ್ಮ ಗ್ರಾಮಗಳಲ್ಲಿ ಒಟ್ಟಾಗಿ ಸಹಕಾರ ಸಂಘಗಳನ್ನು ಸ್ಥಾಪಿಸಿಕೊಂಡು ಕೃಷಿ ಪರಿಕರಗಳನ್ನು ಮಾರಾಟ ಮತ್ತು ಸ್ಥಳೀಯವಾಗಿ ಲಭ್ಯವಿರುವಂತೆ ಮಾಡಬೇಕು’ ಎಂದು ರಾಜ್ಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಮಂಡಳಿ ನಿರ್ದೇಶಕ ಕಂದಿಕೆರೆ ಜಗದೀಶ್ ರೈತರಿಗೆ ಸಲಹೆ ನೀಡಿದರು.
ನಿವೃತ್ತ ಶಿಕ್ಷಕ ಗಡಾರಿ ಕೃಷ್ಣಪ್ಪ, ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ್ ಮಾತನಾಡಿದರು.
ವೇದಿಕೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಎಂ.ವಿ.ಮಂಜುನಾಥ್, ನೂರ್ ಸಮದ್, ಕಿರಣ್ ಕುಮಾರ್, ಪವಿತ್ರಾ, ಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರಾದ ಪೃಥ್ವಿ ಕೂಗಾರ್, ತಿಪ್ಪಮ್ಮ, ವೀರಭದ್ರಪ್ಪ,
ಗಿರೀಶ್, ರಾಮಕೃಷ್ಣ ಹೆಗಡೆ, ರಾಮಣ್ಣ, ರಂಗನಾಥ, ಬಡಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.