ಚಳ್ಳಕೆರೆ: ತಾಲ್ಲೂಕಿನ ವಿವಿಧೆಡೆ ಬುಧವಾರ ರಾತ್ರಿ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು ₹ 39,000 ಮೌಲ್ಯದ 49 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ
ಗೋಪನಹಳ್ಳಿ, ಬೆಳಗೆರೆ ನಾರಾಯಣಪುರ, ಕಮ್ಮತ್ ಮರಿಕುಂಟೆ, ಟಿ.ಎನ್.ಕೋಟೆ, ಯಲಗಟ್ಟೆ ಗೊಲ್ಲರಹಟ್ಟಿ, ಚೌಳೂರು ಮತ್ತು ನಗರದ ಸೋಮಗುದ್ದು ರಸ್ತೆ, ಗಾಂಧಿನಗರ, ಅಂಬೇಡ್ಕರ್ ನಗರ, ಎಪಿಎಂಸಿ ಆವರಣದ ಅಂಗಡಿಗಳ ಮೇಲೆ ದಾಳಿ ನಡೆಸಿದರು.
ತಾಲ್ಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಎಸ್. ಭದ್ರಯ್ಯ ಮತ್ತು ಜೈರಾಂ ವಿರುದ್ದ ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಅಬಕಾರಿ ನಿರೀಕ್ಷಕ ನಾಗರಾಜ ತಿಳಿಸಿದ್ದಾರೆ.
ಚಿತ್ರದುರ್ಗ ಅಬಕಾರಿ ಉಪ ಆಯುಕ್ತರು ಹಾಗೂ ಹಿರಿಯೂರು ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕಿ ವನಿತಾ, ಉಪ ನಿರೀಕ್ಷಕ ಡಿ.ಟಿ. ತಿಪ್ಪಯ್ಯ, ನಾಗರಾಜ, ರಂಗಸ್ವಾಮಿ, ಕಾನ್‌ಸ್ಟೆಬಲ್ ಮಂಜುಳಾ, ಆರ್. ಕುಮಾರ್, ನಾಗರಾಜ ತೋಳಮಟ್ಟಿ ಅವರ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.