ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಚಳ್ಳಕೆರೆ: ಮದ್ಯ ಕುಡಿಯಲು ಮನೆಯವರು ಹಣ ನೀಡದಿದ್ದಕ್ಕೆ ವ್ಯಸನಿಯೊಬ್ಬ ಸೋಮವಾರ ಮನೆಯ ಸಮೀಪದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಬೊಮ್ಮದೇವರಹಟ್ಟಿಯ ಚಂದ್ರಪ್ಪ (60) ಆತ್ಮಹತ್ಯೆ ಮಾಡಿಕೊಂಡವರು.
ಮದ್ಯ ಸೇವಿಸಲು ಮನೆಯಲ್ಲಿ ಪದೇ ಪದೇ ಹಣಕ್ಕೆ ಪೀಡಿಸುತ್ತಿದ್ದರು. ಮನೆಯವರು ಹಣ ಕೊಡದಿದ್ದಾಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.