ADVERTISEMENT

ಈವರೆಗೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ: ಎ. ನಾರಾಯಣಸ್ವಾಮಿ

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 21:42 IST
Last Updated 8 ಸೆಪ್ಟೆಂಬರ್ 2021, 21:42 IST
ಎ. ನಾರಾಯಣಸ್ವಾಮಿ
ಎ. ನಾರಾಯಣಸ್ವಾಮಿ   

ಚಿತ್ರದುರ್ಗ: ‘ಬಿಜೆಪಿ ಕಾರ್ಯಕರ್ತರ ಪಕ್ಷವೇ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ. ಒಬ್ಬ ವ್ಯಕ್ತಿ ನಾಯಕತ್ವ ಅಥವಾ ಮುಖ್ಯಮಂತ್ರಿ ಹೆಸರಿನಲ್ಲಿ ಚುನಾವಣೆ ಮಾಡಿಲ್ಲ. ಈವರೆಗೂ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ’ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಬುಧವಾರ ಸುದ್ದಿಗಾರ
ರೊಂದಿಗೆ ಮಾತನಾಡಿದ ಅವರು, ‘ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಪಕ್ಷ ನಿರ್ಲಕ್ಷ್ಯ ಮಾಡುತ್ತಿಲ್ಲ. ಅವರಿಗೆ ಯಾರೂ ವಿರೋಧ ವ್ಯಕ್ತಪಡಿ
ಸಿಲ್ಲ. ಅವರ ಜಪ ಮಾಡಿಕೊಂಡು ರಾಜಕೀಯ ಮಾಡುವುದು ಅನಿ
ವಾರ್ಯವಾಗಿದೆ. ಅಮಿತ್‌ ಶಾ ಅವರು ಸರಿಯಾಗಿ ಮಾತನಾಡಿದ್ದಾರೆ. ಕಾರ್ಯ ಕರ್ತರ ಪಡೆಯೊಂದಿಗೆ ರಾಜಕಾರಣ ಮಾಡಿ ಮುಂದಿನ ಚುನಾವಣೆ ಗೆಲ್ಲುತ್ತೇವೆ’ ಎಂದರು.

‘ಜನಾ ಶೀರ್ವಾದ ಯಾತ್ರೆಯಲ್ಲಿ ನನ್ನಿಂದ ತಪ್ಪಾಗಿದೆ. ಯಾತ್ರೆಯ ಬಳಿಕ ಕೋವಿಡ್‌ ಹೆಚ್ಚಾಗಿಲ್ಲ ಎಂಬುದು ನನ್ನ ಪುಣ್ಯ. ಗಣೇಶ ಉತ್ಸವದ ಸಂದರ್ಭದಲ್ಲಿ ಕೋವಿಡ್‌ ಬಗ್ಗೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ.
ಸರ್ಕಾರದ ನಿಯಮವನ್ನು ಪಾಲಿಸಿ, ಧರ್ಮ ರಕ್ಷಣೆ ಮಾಡಬೇಕು. ಧಾರ್ಮಿಕ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಸಡ್ಡು ಹೊಡೆಯು ವುದು ಸರಿಯಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.