ADVERTISEMENT

ಮೊಳಕಾಲ್ಮುರು: ಅಂಗನವಾಡಿ ಫೆಡರೇಷನ್‌ನಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 2:47 IST
Last Updated 22 ಸೆಪ್ಟೆಂಬರ್ 2020, 2:47 IST
ಮೊಳಕಾಲ್ಮುರಿನಲ್ಲಿ ಸೋಮವಾರ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಮೊಳಕಾಲ್ಮುರಿನಲ್ಲಿ ಸೋಮವಾರ ಅಂಗನವಾಡಿ ಸಿಬ್ಬಂದಿ ಪ್ರತಿಭಟನೆ ನಡೆಸಿದರು.   

ಮೊಳಕಾಲ್ಮುರು: ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದುಆಗ್ರಹಿಸಿ ಸೋಮವಾರ ತಾಲ್ಲೂಕು ಅಂಗನವಾಡಿ ಫೆಡರೇಷನ್‌ನಿಂದ ಪ್ರತಿಭಟನೆ ನಡೆಸಲಾಯಿತು.

ಐಸಿಡಿಸಿ ಯೋಜನೆ ಅಡಿಯಲ್ಲಿ ಈ ಕಾರ್ಯವನ್ನು ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು. ಈ ಕುರಿತು ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಸರಬರಾಜು ಮಾಡಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪಡೆಯುವಾಗಅಂಗನವಾಡಿ ಕೇಂದ್ರದ ವರ್ಗಾವಣೆ ಪತ್ರವನ್ನು ಕಡ್ಡಾಯ ಮಾಡಬೇಕು ಎಂದು
ಆಗ್ರಹಿಸಿದರು.

ಈ ಕುರಿತು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ADVERTISEMENT

ತಹಶೀಲ್ದಾರ್ ಮಲ್ಲಿಕಾರ್ಜುನ್ ಮನವಿ ಸ್ವೀಕರಿಸಿದರು.

ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದಾ ಬಾಯಿ, ಗಂಗಮ್ಮ, ನಾಗರತ್ನಮ್ಮ, ಭಾಗ್ಯಮ್ಮ, ಮಹಾದೇವಿ, ರಾಜೇಶ್ವರಿ, ಸುಶೀಲಮ್ಮ, ಪಾಲಮ್ಮಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.