ADVERTISEMENT

ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 3:47 IST
Last Updated 17 ಡಿಸೆಂಬರ್ 2021, 3:47 IST
ಶ್ರೀರಾಂಪುರ ಸಮೀಪದ ಬೆಲಗೂರು ಗ್ರಾಮದಲ್ಲಿ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ವೀರಪ್ರತಾಪ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ನೆರವೇರಿತು.
ಶ್ರೀರಾಂಪುರ ಸಮೀಪದ ಬೆಲಗೂರು ಗ್ರಾಮದಲ್ಲಿ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ವೀರಪ್ರತಾಪ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ನೆರವೇರಿತು.   

ಬೆಲಗೂರು (ಶ್ರೀರಾಂಪುರ): ಗ್ರಾಮದ ಐತಿಹಾಸಿಕ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ವೀರಪ್ರತಾಪ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನೆರವೇರಿತು.

ಬ್ರಹ್ಮರಥೋತ್ಸವ ನಿಮಿತ್ತ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತೇರನ್ನು ನಾನಾ ಹೂವು, ಫಲ, ಬಾಳೆಕಂದುಗಳಿಂದ ಹಾಗೂ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ರಾಜ್ಯದ ನಾನಾ ಕಡೆಯಿಂದ ಆಗಮಿಸಿದ್ದ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥ ಮುಂದಕ್ಕೆ ಸಾಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು ತೂರುವ ಮೂಲಕ ಭಕ್ತಿ ಸಮರ್ಪಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಹನುಮ ಜಯಂತಿ ಪ್ರಯುಕ್ತ ಸಂಜೆ ಶ್ರೀರಾಮ ಪಟ್ಟಾಭಿಷೇಕ ಉತ್ಸವ ನಡೆಯಿತು. ಪೀಠದ ಆವರಣದಲ್ಲಿರುವ ಮಹಾಲಕ್ಷ್ಮೀ, ಮಾರುತಿ, ಲಕ್ಷ್ಮೀನಾರಾಯಣ ದೇವಾಲಯ ಹಾಗೂ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಅವರ ನೇತೃತ್ವದಲ್ಲಿ ದೇವಾಲಯದಲ್ಲಿ ಇಡೀ ದಿನ ವಿಶೇಷ ಪೂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿದವು.

ADVERTISEMENT

ಮಾರುತಿ ಮಠದ ಪೀಠಾಧ್ಯಕ್ಷ ವಿಜಯಮಾರುತಿ ಶರ್ಮಾ ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಿದ್ದರು. ಮಠದ ಆಡಳಿತಾಕಾರಿ ಗುರುದತ್ತ, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಮುಂತಾದ ಗಣ್ಯರು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.