ಹೊಸದುರ್ಗ: ತಾಲ್ಲೂಕಿನ ಮಧುರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ ದೇವಾಲಯದ ಆರಂಭೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
2019ಕ್ಕೆ ದೇವಾಲಯದ ನಿರ್ಮಾಣಕ್ಕೆ ಪೂಜೆ ಮಾಡಲಾಗಿತ್ತು. 2024ಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗಿತ್ತು. ₹ 2.5 ಕೋಟಿ ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಂಡಿದ್ದು, ಶಿಲ್ಪಿ ವಿನಯ್ ಕುಮಾರ್ ಕೆತ್ತನೆ ಕಾರ್ಯ ಮಾಡಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಮಹಾಗಣಪತಿ ಪೂಜೆ, ಪುಣ್ಯಾಹವಾಚನ, ಮಹಾಸಂಕಲ್ಪ, ಜಲಾಧಿವಾಸ, ಗೋಪೂಜೆ, ಚಪ್ಪರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.
ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ನೂತನ ದೇವಾಲಯಕ್ಕೆ ಕಳಶಾರೋಹಣ ನೇರವೇರಿಸಿದರು.
ಮಧುರೆ ಮಾರುತಿ ಗ್ರಾಮೀಣಾಭಿವೃದ್ಧಿ ಸೇವಾ ಸಮಿತಿಯ ಸದಸ್ಯರು, ಚನ್ನಗಿರಿ, ತರೀಕೆರೆ, ಹೊಳಲ್ಕೆರೆ, ಚಿಕ್ಕಮಗಳೂರಿನ ನೂರಾರು ಭಕ್ತರು, ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಹಾಗೂ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.