ADVERTISEMENT

‘ಜ. 1ರಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಿ’

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 6:21 IST
Last Updated 28 ನವೆಂಬರ್ 2020, 6:21 IST
ಹಿರಿಯೂರಿನ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಶುಕ್ರವಾರ ತಾಲ್ಲೂಕು ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದರು
ಹಿರಿಯೂರಿನ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಶುಕ್ರವಾರ ತಾಲ್ಲೂಕು ರೈತ ಸಂಘದ ಮುಖಂಡರು ಮನವಿ ಸಲ್ಲಿಸಿದರು   

ಹಿರಿಯೂರು: ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ 2021ರ ಜ. 1ರಿಂದ ನೀರು ಹರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಶುಕ್ರವಾರ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

‘ನ. 29ರ ವೇಳೆಗೆ ಜಲಾಶಯದ ನೀರಿನಮಟ್ಟ 102 ಅಡಿ ಮುಟ್ಟಲಿದ್ದು, ಅಚ್ಚುಕಟ್ಟು ಪ್ರದೇಶದ ತೆಂಗು, ಅಡಿಕೆ, ಬಾಳೆ, ಶೇಂಗಾ, ರಾಗಿ, ತರಕಾರಿ ಬೆಳೆಗಳ ಉಳಿವಿಗೆ ವರ್ಷದಲ್ಲಿ ಆರು ಬಾರಿ ನೀರು ಹರಿಸಬೇಕಿದೆ. ಹೀಗಾಗಿ, ಮೊದಲ ನೀರನ್ನು ಜ. 1ರಿಂದ ಹರಿಸಬೇಕು. ಈ ಬಗ್ಗೆ ಕೃಷಿ, ತೋಟಗಾರಿಕೆ ಅಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳ ಜತೆ ಚರ್ಚಿಸಿ ನೀರು ಬಿಡುವ ಕುರಿತು ಕ್ಯಾಲೆಂಡರ್ ಬಿಡುಗಡೆ ಮಾಡಬೇಕು’ ಎಂದು ರೈತ ಮುಖಂಡರು ಒತ್ತಾಯಿದರು.

ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಸಿ.ಸಿದ್ದರಾಮಣ್ಣ, ಕಸವನಹಳ್ಳಿ ರಮೇಶ್, ವಿರೂಪಾಕ್ಷಪ್ಪ, ರಾಮಚಂದ್ರು, ಸಿದ್ದಪ್ಪ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.