ADVERTISEMENT

ಕುಂಚಿಟಿಗ ಕುಲಶಾಸ್ತ್ರ ವರದಿ ಜಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 4:07 IST
Last Updated 27 ಅಕ್ಟೋಬರ್ 2020, 4:07 IST
ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದರು
ಹೊಸದುರ್ಗದ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಸಲ್ಲಿಸಿದರು   

ಹೊಸದುರ್ಗ: ರಾಜ್ಯದ ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಸಂಪುಟಕ್ಕೆ ತಂದು ಯಥಾವತ್ ಜಾರಿ ಮಾಡಬೇಕು, ಗೆಜೆಟ್ ಪ್ರಕಟಣೆ ಹೊರಡಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಮನವಿ ಸಲ್ಲಿಸಿದರು.

ಕುಂಚಿಟಿಗ ಮಹಾಸಂಸ್ಥಾನ ಮಠಕ್ಕೆ ಸೋಮವಾರ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸ್ವಾಮೀಜಿ ಮನವಿ ಮಾಡಿದರು.

ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಈ ಸಮುದಾಯವನ್ನು ಪ್ರವರ್ಗ ಒಂದಕ್ಕೆ ಸೇರಿಸಬೇಕು. ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯತ್ವ ಸೇರಿ ಕೆಪಿಎಸ್‌ಸಿ, ಹಿಂದುಳಿದ ವರ್ಗಗಳ ಆಯೋಗಕ್ಕೆ ಸದಸ್ಯರ ನೇಮಕ, ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗೆ ನೇಮಕ, ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪತ್ರ ಸ್ಪೀಕರಿಸಿದ ಬಿ.ವೈ.ವಿಜಯೇಂದ್ರ, ‘ಕುಂಚಿಟಿಗ ಸಮುದಾಯದ ಸಮಸ್ಯೆಗಳು, ಬೇಡಿಕೆಗಳು ಗಮನಕ್ಕೆ ಬಂದಿದೆ. ಉಪಚುನಾವಣೆ ಮುಗಿದ ತಕ್ಷಣ ಮುಖ್ಯಮಂತ್ರಿ ಗಮನಕ್ಕೆ ತಂದು ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಶಿರಾ ಕ್ಷೇತ್ರದಲ್ಲಿ ಕುಂಚಿಟಿಗ ಸಮಾಜದ ವ್ಯಕ್ತಿಗೆ ಅವಕಾಶ ನೀಡಿದ್ದೇವೆ. ಇದು ಕುಂಚಿಟಿಗ ಸಮಾಜದ ಬಗೆಗಿನ ನಮ್ಮ ಪ್ರಿತಿ ತೋರಿಸುತ್ತದೆ’ ಎಂದು ತಿಳಿಸಿದರು.

ಶಾಸಕ ಗೂಳಿಹಟ್ಟಿ ಡಿ.ಶೇಖರ್, ಕೆ.ಎಸ್.ನವೀನ್, ಶೇಖರಪ್ಪ, ದೇವರಾಜ್, ಜ್ಞಾನೇಶ್, ಲೋಕಣ್ಣ, ದ್ಯಾಮಣ್ಣ ಕಲ್ಲೇಶಪ್ಪ, ತಮ್ಮಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.