ADVERTISEMENT

ಹಿರಿಯೂರು: ಕಾಡುಗೊಲ್ಲ ನಿಗಮದ ಸೌಲಭ್ಯ ಬಳಸಿಕೊಳ್ಳಲು ಮನವಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 13:43 IST
Last Updated 3 ಜೂನ್ 2025, 13:43 IST
ರಾಜಣ್ಣ
ರಾಜಣ್ಣ   

ಹಿರಿಯೂರು: ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಮುದಾಯದವರು ಈ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕಾಡುಗೊಲ್ಲರ ಸಂಘದ ರಾಜ್ಯ ಘಟಕದ ಅಧ್ಯಕ್ಷ ರಾಜಣ್ಣ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಸ್ಥಾಪಿಸಿರುವ ಅಭಿವೃದ್ಧಿ ನಿಗಮದಲ್ಲಿ ಸಾಕಷ್ಟು ಅನುದಾನವಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಾಸವಾಗಿರುವ ಸಮುದಾಯದವರು ಕಾಡುಗೊಲ್ಲ ಜಾತಿ ಪ್ರಮಾಣಪತ್ರ ಪಡೆದುಕೊಂಡು ನಿಗಮದಲ್ಲಿ ದೊರೆಯುವ ಸೌಲಭ್ಯ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗಕ್ಕೆ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ ಸೇರಿ ವಿವಿಧ ಯೋಜನೆಗಳಿವೆ. ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ರಾಜಣ್ಣ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.