ಚಳ್ಳಕೆರೆ: ವಸತಿ ರಹಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡಿ, ವಸತಿ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಗ್ರಾಮಸ್ಥರಿಗೆ ಸಲಹೆ ನೀಡಿದರು.
ನಗರದ ಶಾಸಕರ ಭವನದಲ್ಲಿ ಶನಿವಾರ ತಾಲ್ಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮಸ್ಥರ ಕುಂದುಕೊರತೆ ಆಲಿಸಿ ಮಾತನಾಡಿದರು.
ಗ್ರಾಮದ ಸರ್ಕಾರಿ ಗೋಮಾಳದ 5 ಎಕರೆ ಪ್ರದೇಶದಲ್ಲಿಅರ್ಧ ಎಕರೆ ಜಾಗ ಮತ್ತು ಅಕ್ರಮ ಶೆಡ್, ಕಣ ಮತ್ತು ರೊಪ್ಪವನ್ನು ಕೂಡಲೇ ತೆರವುಗೊಳಿಸಬೇಕು. ಜಾಗ ಸರ್ವೆ ಮಾಡಿ ನಿವೇಶನ ಹಂಚಿಕೆಗೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅರ್ಹ ಫಲಾನುಭವಿಗಳಿಗೆ ನಿವೇಶನ ದೊರೆಯುತ್ತವೆ. ಇನ್ನುಳಿದ ಜಾಗದಲ್ಲಿ ಶಾಲೆ, ಅಂಗನವಾಡಿ, ಆಸ್ಪತ್ರೆ ಮತ್ತು ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡಲಾಗುವುದು. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ತಹಶೀಲ್ದಾರ್ ರೇಹಾನ್ ಪಾಷ, ತಾಲ್ಲೂಕು ಪಂಚಾಯಿತಿ ಇಒ ಎಚ್.ಶಶಿಧರ್, ಪೊಲೀಸ್ ಇನ್‌ಸ್ಪೆಕ್ಟರ್ ಆರ್.ಎಫ್. ದೇಸಾಯಿ, ನಗರಸಭೆ ಸದಸ್ಯ ರಮೇಶ್‌ಗೌಡ, ನಾಮನಿರ್ದೇಶಕ ಸದಸ್ಯ ಭದ್ರಿ, ಗ್ರಾಮ ಲೆಕ್ಕಾಧಿಕಾರಿ ಕೇಶವಾಚಾರಿ, ಗ್ರಾಮದ ಮುಖಂಡ ಕರಿಬಸಪ್ಪ, ಮಲ್ಲಿಕಾರ್ಜುನ, ಓಂಕಾರಪ್ಪ, ನಿಂಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.