ADVERTISEMENT

76ನೇ ಸ್ವಾತಂತ್ರ್ಯೋತ್ಸವ: ಚಿತ್ರದುರ್ಗದಲ್ಲಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 5:11 IST
Last Updated 15 ಆಗಸ್ಟ್ 2022, 5:11 IST
ಕೃಷಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣವನ್ನು ನೆರವೇರಿಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣವನ್ನು ನೆರವೇರಿಸಿದರು.   

ಚಿತ್ರದುರ್ಗ: ಇಲ್ಲಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ ಸೋಮವಾರ ನೆರವೇರಿಸಿದರು.

ತೆರೆದ ವಾಹನದಲ್ಲಿ ತೆರಳಿ ಪಥಸಂಚಲನಕ್ಕೆ ಸಜ್ಜಾಗಿದ್ದ ತಂಡಗಳ ಪರಿವೀಕ್ಷಣೆ ನಡೆಸಿದರು. ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.