ADVERTISEMENT

ನಾಯಕತ್ವಕ್ಕಾಗಿ ಕಾಂಗ್ರೆಸ್‌ನವರಿಂದ ಮೇಕೆದಾಟು ಪಾದಯಾತ್ರೆ: ಬಿ.ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 4:16 IST
Last Updated 2 ಮಾರ್ಚ್ 2022, 4:16 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ನಾಯಕನಹಟ್ಟಿ: ರಾಜ್ಯ ಕಾಂಗ್ರೆಸ್ ನಾಯಕರು ನಾಯಕತ್ವಕ್ಕಾಗಿ ಮೇಕೆದಾಟು ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರು ಸರಬರಾಜು ಮತ್ತು ವಿದ್ಯುತ್ ಉತ್ಪಾದನೆಗಾಗಿ ರೂಪಿಸಿರುವ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಕಾಂಗ್ರೆಸ್ ನಾಯಕರು ಅಡ್ಡಿಪಡಿಸುತ್ತಿದ್ದಾರೆ. ಕೈ ನಾಯಕ ನಡುವೆಯೇ ಹಲವು ಗೊಂದಲಗಳಿದ್ದು, ಪಕ್ಷದ ನಾಯಕತ್ವಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಹೆಚ್ಚಿದೆ. ಆದಕಾರಣ ನಾ ಮುಂದು ತಾ ಮುಂದು ಎನ್ನುವಂತೆ ಲವಲವಿಕೆಯಿಂದ ಪಾದಯಾತ್ರೆ
ಹಮ್ಮಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ದ್ದಾಗ ಮೇಕೆದಾಟು ಯೋಜನೆಯನ್ನುಏಕೆ ಅನುಷ್ಠಾನ
ಗೊಳಿಸಲಿಲ್ಲ’ ಎಂದು ಪ್ರಶ್ನಿಸಿದರು.

‘ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆಯಿಸಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ನಾನು ಕೂಡ ರಾಯಚೂರು, ಬಳ್ಳಾರಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳ ವಿದ್ಯಾರ್ಥಿಗಳ ಮಾಹಿತಿ ಪಡೆದು ಸಂಬಂಧಪಟ್ಟ ಸಚಿವರಿಗೆ ಮಾಹಿತಿ ರವಾನಿಸಿದ್ದೇನೆ. ಈಗಾಗಲೇ ಹಲವು ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ. ಪೋಷಕರು ಆತಂಕ ಪಡಬಾರದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.