ಚಿತ್ರದುರ್ಗ: ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಹೇಳಿಕೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಮಾದಿಗ ಮಹಾಸಭಾ, ಜೈಭೀಮ್ ವಾರಿಯರ್ರ್ಸ್ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಯತ್ನಾಳ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ರಾಜ್ಯದಿಂದ ಗಡಿಪಾರು ಮಾಡುಡಬೇಕು. ಬಿಜೆಪಿಯಿಂದ ಉಚ್ಛಾಟಿತರಾಗಿದ್ದರೂ ಯತ್ನಾಳ್ ಅವರು ಬುದ್ಧಿ ಕಲಿತಿಲ್ಲ. ಜಾತಿ, ಧರ್ಮಗಳ ಮಧ್ಯೆ ಕಲಹ ಉಂಟು ಮಾಡುವ, ಕೋಮು ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡುತ್ತಿದ್ದಾರೆ. ದಲಿತ ಸಮುದಾಯಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಚಾಮುಂಡೇಶ್ವರಿ ದೇವಿ ಪೂಜಿಸುವುದು, ಪುಷ್ಪ ಸಮರ್ಪಿಸುವುದು ಶೂದ್ರರಿಗೆ ಹಾಗೂ ದಲಿತ ಮಹಿಳೆಯರಿಗೆ ನಿಷಿದ್ಧವೆಂಬ ಹೇಳಿಕೆ ನೀಡಿದ್ದಾರೆ. ಆ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಉಂಟು ಮಾಡಿದ್ದಾರೆ. ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿಕೊಳ್ಳುತ್ತಿಲ್ಲ. ಆದ್ದರಿಂದ ಕೂಡಲೇ ಗಡಿಪಾರು ಮಾಡುವಂತೆ ಕೋರಿದರು.
ಮಹಾಸಭಾದ ಅಧ್ಯಕ್ಷ ಹನುಮಂತಪ್ಪ ದುರ್ಗ, ಜೈಭೀಮ್ ವಾರಿಯರ್ರ್ಸ್ ಅಧ್ಯಕ್ಷ ಪಿ.ಆರ್.ಹರೀಶ್‌ಕುಮಾರ್, ಮುಖಂಡರಾದ ಬಿ.ರಾಜಪ್ಪ, ರುದ್ರಮುನಿ, ಮಹಲಿಂಗಪ್ಪ, ಸುರೇಶ್, ತಿಪ್ಪೇಸ್ವಾಮಿ, ರತ್ನಮ್ಮ, ಗೀತಾ, ಶೋಭರಾಜ್, ಅನಂತಮೂರ್ತಿ ನಾಯ್ಕ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.