
ಪ್ರಜಾವಾಣಿ ವಾರ್ತೆ
ಕರಡಿ
ಮೊಳಕಾಲ್ಮುರು: ತಾಲ್ಲೂಕಿನ ಹಾನಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಗುರುವಾರ ಕರಡಿಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
‘ಗ್ರಾಮಕ್ಕೆ ಹೊಂದಿಕೊಂಡಿರುವ ಕಲ್ಲಿನ ಬೆಟ್ಟದಲ್ಲಿ ಕರಡಿಯು ಕಾಣಿಸಿಕೊಂಡಿದೆ. ರಾತ್ರಿ ವೇಳೆ ಗ್ರಾಮದ ಒಳಗಡೆ ಸಹ ಬಂದು ಹೋಗುತ್ತಿದೆ. ಪರಿಣಾಮ ಕತ್ತಲಾದ ನಂತರ ಮಕ್ಕಳು, ಮಹಿಳೆಯರು ಓಡಾಡಲು ಭಯಪಡುತ್ತಿದ್ದಾರೆ. ಸಾಕಷ್ಟು ಸಲ ಮಧ್ಯರಾತ್ರಿ ಗ್ರಾಮದ ಒಳಗಡೆ ಬಂದು ಓಡಾಡುವುದನ್ನು ಗ್ರಾಮಸ್ಥರು ನೋಡಿದ್ದಾರೆ’ ಎಂದು ನಿವಾಸಿ ಅಜ್ಜಪ್ಪ ಹೇಳಿದರು.
ಏನಾದರೂ ಅನಾಹುತ ಸಂಭವಿಸುವ ಮುನ್ನವೇ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.