ADVERTISEMENT

ಶುಲ್ಕಕ್ಕೆ ಪೀಡಿಸಿದರೆ ಮಾನ್ಯತೆ ರದ್ದು: ಬಿಇಒ ಸಿದ್ದಪ್ಪ

ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಬಿಇಒ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 13:09 IST
Last Updated 26 ನವೆಂಬರ್ 2020, 13:09 IST
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಾನಾಯ್ಕ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು, ಜೀವ ವೈವಿಧ್ಯ ನಿರ್ವಹಣಾ ಸಮಿತಿ ಅಧ್ಯಕ್ಷ ಸುರೇಶ್‍ ನಾಯ್ಕ್  ಇದ್ದಾರೆ.
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಾನಾಯ್ಕ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು, ಜೀವ ವೈವಿಧ್ಯ ನಿರ್ವಹಣಾ ಸಮಿತಿ ಅಧ್ಯಕ್ಷ ಸುರೇಶ್‍ ನಾಯ್ಕ್  ಇದ್ದಾರೆ.   

ಚಿತ್ರದುರ್ಗ: ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಪಾವತಿಸುವಂತೆ ಪೀಡಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಬಿಇಒ ಸಿದ್ದಪ್ಪ ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಗುರುವಾರ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕದ ಬಗ್ಗೆ ಚರ್ಚಿಸಯಿತು. ಶುಲ್ಕಕ್ಕೆ ಒತ್ತಾಯಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸುವಂತೆ ತಾಲ್ಲೂಕು ಪಂಚಾಯಿತಿ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.

ಜೀವ ವೈವಿಧ್ಯ ನಿರ್ವಹಣಾ ಸಮಿತಿ ಅಧ್ಯಕ್ಷ ಸುರೇಶ್‍ ನಾಯ್ಕ್ ಮಾತನಾಡಿ, ‘ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಶುಲ್ಕ ಪಾವತಿಸುವಂತೆ ಪೋಷರನ್ನು ಪೀಡಿಸುತ್ತಿವೆ. ಶಿಕ್ಷಕರಿಂದ ದೂರವಾಣಿ ಕರೆ ಮಾಡಿಸಿ ಬ್ಲ್ಯಾಕ್‌ ಮೇಲ್ ಮಾಡಲಾಗುತ್ತಿದೆ. ಶುಲ್ಕ ಪಾವತಿಸದ ವಿದ್ಯಾರ್ಥಿಗೆ ಆನ್‌ಲೈನ್ ತರಗತಿಗೆ ಅವಕಾಶ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಬಹುತೇಕ ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಶುಲ್ಕ ಪಾವತಿಸುವಂತೆ ಕೇಳುವುದು ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು. ಇದಕ್ಕೆ ಇತರ ಸದಸ್ಯರು ಧ್ವನಿಗೂಡಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಾನಾಯ್ಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.