ADVERTISEMENT

ವಿದ್ಯುತ್ ಖಾಸಗೀಕಣಕ್ಕೆ ನೌಕರರ ವಿರೋಧ

ಕೆಪಿಟಿಸಿಎಲ್‌, ಬೆಸ್ಕಾಂ ಕಚೇರಿಯಲ್ಲಿ ಪ್ರತಿಭಟನೆ, ಸರ್ಕಾರದ ವಿರುದ್ಧ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 14:09 IST
Last Updated 5 ಅಕ್ಟೋಬರ್ 2020, 14:09 IST
ಚಿತ್ರದುರ್ಗದ ಬೆಸ್ಕಾಂ ಕಚೇರಿ ಎದುರು ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಬೆಸ್ಕಾಂ ಕಚೇರಿ ಎದುರು ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ವಿದ್ಯುತ್‌ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೀದಿಗೆ ಇಳಿದ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ನೌಕರರು ಜಿಲ್ಲೆಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಒಕ್ಕೋರಲಿನ ಆಕ್ಷೇಪ ದಾಖಲಿಸಿದರು.

ಚಿತ್ರದುರ್ಗದ ಬೆಸ್ಕಾಂ ಕಚೇರಿ ಎದುರು ಜಮಾಯಿಸಿದ ನೌಕರರು ಪ್ಲೆಕಾರ್ಡ್‌ಗಳನ್ನು ಹಿಡಿದು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯುತ್‌ ಕಂಪನಿಗಳ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ಸಾರ್ವಜನಿಕರು ಹಾಗೂ ರೈತರಿಗೆ ತೊಂದರೆ ಆಗಲಿದೆ. ಜನಸಾಮಾನ್ಯರಿಗೆ ವಿದ್ಯುತ್‌ ಹೊರೆಯಾಗಿ ಪರಿಣಮಿಸಲಿದೆ. ಇದೊಂದು ಕಾರ್ಮಿಕ ವಿರೋಧಿ ನೀತಿಯಾಗಲಿದೆ ಎಂದು ಆರೋಪಿಸಿದರು.

ADVERTISEMENT

‘ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿದ್ದೇವೆ. ಖಾಸಗೀಕರಣಕ್ಕೆ ಅವಕಾಶ ಕಲ್ಪಿಸಿದರೆ ಜನರಿಗೆ ತೊಂದರೆ ಉಂಟಾಗಲಿದೆ. ವಿದ್ಯುತ್‌ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು’ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಪಿ. ಬಸವರಾಜು ಮನವಿ ಮಾಡಿದರು.

ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ತಿಪ್ಪೇಸ್ವಾಮಿ, ಕಾರ್ಯದರ್ಶಿ ಚಿದಾನಂದಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.