ADVERTISEMENT

ಚಿತ್ರದುರ್ಗ: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 4:34 IST
Last Updated 27 ಸೆಪ್ಟೆಂಬರ್ 2021, 4:34 IST
   

ಚಿತ್ರದುರ್ಗ: ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರೆನೀಡಿರುವ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ರೈತರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ್ ನೇತೃತ್ವದಲ್ಲಿ ಗಾಂಧಿ ವೃತ್ತದಲ್ಲಿ ಜಮಾಯಿಸಿದ ರೈತರು ಈರುಳ್ಳಿಯನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದರು. ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಬೆಳೆಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘಗಳ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಅಗತ್ಯ ವಸ್ತು ಹೊರತುಪಡಿಸಿ ಉಳಿದ ಅಂಗಡಿಗಳು ಬಾಗಿಲು ತೆರೆದಿಲ್ಲ. ವಾಹನ, ಬಸ್ ಸಂಚಾರ ಸಹಜವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.