
ಪ್ರಜಾವಾಣಿ ವಾರ್ತೆ
ಚಳ್ಳಕೆರೆ: ತಾಲ್ಲೂಕಿನ ಸಾಣಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗೆರೆ ಗ್ರಾಮದ ಸಮೀಪ ಸಂಭವಿಸಿದ ಅಪಘಾತದಲ್ಲಿ ಎಎಸ್‍ಐ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳಾ ಹೆಡ್ ಕಾನ್‌ಸ್ಟೆಬಲ್ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ತಾಲ್ಲೂಕಿನ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‍ಐ ಮಂಜುನಾಥ್ (49) ಮೃತಪಟ್ಟಿದ್ದು, ಚಿತ್ರದುರ್ಗ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಸೂರ್ಯಪ್ರಭಾ ಗಾಯಗೊಂಡಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಜುನಾಥ್ ಹಾಗೂ ಸೂರ್ಯಪ್ರಭಾ ಅವರು ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಚಳ್ಳಕೆರೆ ಕಡೆಗೆ ಬೈಕ್‍ನಲ್ಲಿ ತೆರಳುತ್ತಿದ್ದರು. ಹೆಗ್ಗೆರೆ ಕ್ರಾಸ್ ಬಳಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.