ಚಳ್ಳಕೆರೆ: ‘ವಿಧಾನಸಭಾ ಚುನಾವಣೆಗೆ 2028ರವರೆಗೂ ಕಾಯಬೇಕಾಗಿಲ್ಲ. ಡಿಸೆಂಬರ್ ಬಳಿಕ ಯಾವುದೇ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
‘ಬಿಜೆಪಿಯು 150 ಶಾಸಕರ ಬಲದೊಂದಿಗೆ ಸರ್ಕಾರ ರಚಿಸುವ ವಿಶ್ವಾಸ ಇದೆ. ಕಾಂಗ್ರೆಸ್ ಸರ್ಕಾರ ಈವರೆಗೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿಲ್ಲ. ಸ್ವಪಕ್ಷೀಯ ಶಾಸಕರೇ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಶೀಘ್ರ ಪತನಗೊಳ್ಳಲಿದೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕುಸಿದಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಜನ ಶಾಪ ಹಾಕುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.