ADVERTISEMENT

ದೇಶದಲ್ಲಿ ಬಿಜೆಪಿ ಅಲೆ ‌ಗಟ್ಟಿ

ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:52 IST
Last Updated 8 ನವೆಂಬರ್ 2020, 3:52 IST
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಬಿಜೆಪಿ ಕಾರ್ಯಕಾರಿಣಿಯನ್ನು ವಿಧಾನಪರಿಷತ್ ಸದಸ್ಯ ಎನ್‌. ರವಿಕುಮಾರ್ ಉದ್ಘಾಟಿಸಿದರು.
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಬಿಜೆಪಿ ಕಾರ್ಯಕಾರಿಣಿಯನ್ನು ವಿಧಾನಪರಿಷತ್ ಸದಸ್ಯ ಎನ್‌. ರವಿಕುಮಾರ್ ಉದ್ಘಾಟಿಸಿದರು.   

ಮೊಳಕಾಲ್ಮುರು: ಕೇಂದ್ರದ ಬಿಜೆಪಿ ಸರ್ಕಾರ ಹೆಚ್ಚು, ಹೆಚ್ಚು ಜನಪರ ಕಾರ್ಯಗಳನ್ನು ರೂಪಿಸುತ್ತಿರುವ ಕಾರಣ ದೇಶದಲ್ಲಿ ನರೇಂದ್ರಮೋದಿ ಹಾಗೂ ಬಿಜೆಪಿ ಅಲೆ ಇನ್ನಷ್ಟು ಹೆಚ್ಚಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.

ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದರು.

ಬಿಜೆಪಿ ಸರ್ಕಾರ ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನಗರಗಳ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಿದೆ. ಗ್ರಾಮೀಣ ಮಟ್ಟಕ್ಕೆ ಪಕ್ಷದ ಸಾಧನೆತೆಗೆದುಕೊಂಡು ಹೋಗಲು
ಕಾರ್ಯಕರ್ತರು ಶ್ರಮಿಸಬೇಕು. ಯುವ
ಸಮೂಹ ಪಕ್ಷದ ಕಾರ್ಯಕ್ರಮಗಳನ್ನು ಒಪ್ಪಿ ಪಕ್ಷದ ಸಿದ್ಧಾಂತಗಳನ್ನು ಪಾಲಿಸುತ್ತಿದ್ದಾರೆಎಂದು ಹೇಳಿದರು.

ADVERTISEMENT

ಶಾಸಕ ಚಂದ್ರಪ್ಪ, ‘ವಿಶ್ವದಲ್ಲಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಬಿಜೆಪಿ. ಮುಖಂಡರು, ಕಾರ್ಯಕರ್ತರು ಜನರ ಸೇವಕರಾಗಿ ಕೆಲಸ ಮಾಡುತ್ತಿರುವುದು ಮುಖ್ಯ ಅಂಶ. ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆತರಲು ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.

ಶಾಸಕಿ ಪೂರ್ಣಿಮಾ ಶ್ರೀನಿವಾಸ್, ‘ಭದ್ರಾ ಮೇಲ್ದಂಡೆ ಯೋಜನೆ ಚುರುಕುಗೊಂಡಿದ್ದು ಬಿಜೆಪಿ ಅಧಿಕಾರ ಅವಧಿಯಲ್ಲಿ. ಕೆರೆಗಳಿಗೆ ನೀರು ತುಂಬಿದಲ್ಲಿ ಕೃಷಿ ಕಾರ್ಯಗಳು ಹೆಚ್ಚಿ ಜನರು ಸಮೃದ್ಧಿ ಜೀವನ ನಡೆಸುತ್ತಾರೆ. ವಾಣಿವಿಲಾಸ ಜಲಾಶಯಕ್ಕೂ ಈ ವರ್ಷ ಹೆಚ್ಚು ನೀರು ಬಂದಿದೆ’ ಎಂದರು.

ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಗೂಳಿಹಟ್ಟಿ ಶೇಖರ್ ಮಾತನಾಡಿದರು.

ಜಿಲ್ಲಾಧ್ಯಕ್ಷ ಮುರಳಿ ಯಾದವ್, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲಾಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್, ರಾಮರೆಡ್ಡಿ ಹಾಗೂ ವಿವಿಧಮೋರ್ಚಾಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.