ADVERTISEMENT

3 ದಿನದಲ್ಲಿ ಕೇಂದ್ರದಿಂದ ಪರಿಹಾರ ಬಿಡುಗಡೆ: ಸಿರಿಗೆರೆಯಲ್ಲಿ ಯಡಿಯೂರಪ್ಪ ಆಶ್ವಾಸನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 7:23 IST
Last Updated 24 ಸೆಪ್ಟೆಂಬರ್ 2019, 7:23 IST
ಸಿರಿಗೆರೆಯಲ್ಲಿ ನಡೆಯುತ್ತಿರುವ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ. ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಜಿ, ಸಾಣೇಹಳ್ಳಿ ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶಾಮನೂರು ಶಿವಶಂಕರಪ್ಪ, ಕೆ.ಆರ್‌.ಜಯದೇವಪ್ಪ, ಜಿ.ಎಂ. ಸಿದ್ದೇಶ್ವರ ಇತರರು ಇದ್ದಾರೆ.

ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಮೂರು ದಿನಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ತಾಲ್ಲೂಕಿನ ಸಿರಿಗೆರೆಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಸಮಾರಂಭಕ್ಕೆ ಮಂಗಳವಾರ ಆಗಮಿಸಿದ ಮುಖ್ಯಮಂತ್ರಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

ರಾಜ್ಯ ಸರ್ಕಾರದಿಂದ ಈಗಾಲೇ ಎರಡೂವರೆ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಸೇತುವೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.

ADVERTISEMENT

ಮನೆ ಕಳೆದುಕೊಂಡವರಿಗೆ ₹ 5 ಲಕ್ಷ ಹಾಗೂ ಭಾಗಶಃ ಹಾನಿಗೆ ಒಂದು ಲಕ್ಷ ಕೊಡಲಾಗುತ್ತಿದೆ. ಮೊದಲಗಂತದಲ್ಲಿ ಸಂತ್ರಸ್ತರಿಗೆ ₹ 1 ಲಕ್ಷ ಬಿಡುಗಡೆ ಮಾಡಲಾಗಿದೆ. ನೆರೆ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಕೆಲ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ರದ್ದು ಮಾಡಲಿದೆ ಎಂದರು.

ರೈತರ ಸಾಲಮನ್ನಾಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುತ್ತೇವೆ. ಹಂತಹಂತವಾಗಿ ರೈತರ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಧುಸ್ವಾಮಿ, ಸಂಸದರಾದ ಎ. ನಾರಾಯಣಸ್ವಾಮಿ, ಜಿ.ಎಂ.ಸಿದ್ದೇಶ್ವರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.