ADVERTISEMENT

ಬಸ್ ಡಿಕ್ಕಿ ವಿದ್ಯಾರ್ಥಿನಿ ಸಾವು

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 8:56 IST
Last Updated 21 ಜೂನ್ 2019, 8:56 IST
   

ಚಿತ್ರದುರ್ಗ: ಇಲ್ಲಿನ ಜೆಎಂಐಟಿ ಕಾಲೇಜು ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಅಮೃತ (12) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಮನೆಯಿಂದ ಶಾಲೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ತಾತ ಕೃಷ್ಣಾ ರೆಡ್ಡಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹೋದರಿ ಅಂಕಿತಾ ಅಪಾಯದಿಂದ ಪಾರಾಗಿದ್ದಾಳೆ.

ಕೃಷ್ಣಾ ರೆಡ್ಡಿ ಅವರು ಇಬ್ಬರು ಮೊಮ್ಮಕ್ಕಳನ್ನು ಎಸ್ ಆರ್ ಎಸ್ ಶಾಲೆಗೆ ಬಿಡಲು ಕರೆತರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ದಾವಣಗೆರೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಮೃತ ತಲೆ ಮೇಲೆ ಬಸ್ಸಿನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.