
ಚಿತ್ರದುರ್ಗ ಬಸ್ ಅಪಘಾತ
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ಬಸ್ ಮತ್ತು ಕಂಟೇನರ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಸುಟ್ಟು ಕರಕಲಾದವರ ಮೃತದೇಹಗಳ ಡಿಎನ್‌ಎ ಪರೀಕ್ಷೆಗಾಗಿ ಇಲ್ಲಿನ ವೈದ್ಯರ ತಂಡ ಹುಬ್ಬಳ್ಳಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತೆರಳಿದೆ.
ಮೃತಪಟ್ಟವರ ಕುಟುಂಬ ಸದಸ್ಯರ ರಕ್ತದ ಮಾದರಿ ಹಾಗೂ ಮೃತದೇಹಗಳ ಮೂಳೆ ಮಾದರಿಗಳನ್ನು ಸಂಗ್ರಹಿಸಿದ್ದು, ಡಾ.ವೇಣು ಹಾಗೂ ಡಾ.ಅಜಯ್ ನೇತೃತ್ವದ ತಂಡ ಹುಬ್ಬಳ್ಳಿಗೆ ತೆರಳಿದೆ.
‘ಡಿಎನ್‌ಎ ಪರೀಕ್ಷಾ ವರದಿ ಬರಲು ಎರಡು ದಿನ ಆಗುತ್ತದೆ. ನಂತರವಷ್ಟೇ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಾಗುವುದು. ಈ ವಿಷಯವನ್ನು ಕುಟುಂಬ ಸದಸ್ಯರ ಗಮನಕ್ಕೆ ತರಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಕುಟುಂಬ ಸದಸ್ಯರು ಈಗಾಗಲೇ ಮೃತದೇಹಗಳ ಗುರುತು ಪತ್ತೆ ಮಾಡಿದ್ದಾರೆ. ಆದರೂ ಪೊಲೀಸರು ನ್ಯಾಯಾಲಯದ ಅನುಮತಿಯೊಂದಿಗೆ ಡಿಎನ್‌ಎ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.