
ಚಿತ್ರದುರ್ಗ: ‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರಕ್ಕೆ ಪಾದಯಾತ್ರೆ ಕೈಗೊಳ್ಳುವು ದಾಗಿ ಹೇಳಿದ್ದಾರೆ. ಅವರು ಪಾದಯಾತ್ರೆ ನಡೆಸುವುದು ಹಾಗಿರಲಿ ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ಶಿಕಾರಿಪುರಕ್ಕೇ ಬಂದು ಸ್ಪರ್ಧೆ ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದರು.
‘ಬಳ್ಳಾರಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಬೇಕು ಎಂಬುದು ಜನಾರ್ದನರೆಡ್ಡಿ, ಶ್ರೀರಾಮುಲು ಅವರ ಅಭಿಪ್ರಾಯ ಮಾತ್ರವಲ್ಲ. ರಾಜ್ಯದ ಎಲ್ಲ ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ. ಈ ಕುರಿತು ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮೊದಲ ಹಂತದಲ್ಲಿ ಜ. 17ಕ್ಕೆ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಎನ್‍ಡಿಎ ಸೇರಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಪಕ್ಷದ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.