ADVERTISEMENT

ಪ್ರಾದೇಶಿಕ ಭಾಷೆಗಳು ಅಪಾಯದಲ್ಲಿವೆ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2019, 12:35 IST
Last Updated 14 ಸೆಪ್ಟೆಂಬರ್ 2019, 12:35 IST
ಸಿ.ಟಿ.ರವಿ
ಸಿ.ಟಿ.ರವಿ   

ಚಿತ್ರದುರ್ಗ: ಕನ್ನಡ ಸೇರಿದಂತೆ ದೇಶದ ಎಲ್ಲ ಪ್ರಾದೇಶಿಕ ಭಾಷೆಗಳು ಅಪಾಯದಲ್ಲಿವೆ. ಎರಡು ತಲೆಮಾರುಗಳ ಬಳಿಕ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆತಂಕ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾಷೆ ಕೇವಲ ಸಂವಹನಕ್ಕೆ ಇರುವ ಸಾಧನವಲ್ಲ. ಅದರೊಂದಿಗೆ ಸಂಸ್ಕೃತಿ ಇದೆ. ಭಾಷೆಗೆ ಧಕ್ಕೆಯುಂಟಾದರೆ, ಸಂಸ್ಕೃತಿಯೂ ನಾಶವಾಗುತ್ತದೆ. ಅವಸಾನದ ಅಂಚಿಗೆ ಸಾಗಿರುವ ಭಾಷೆಗಳನ್ನು ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಸಾಹಿತಿಗಳು ಸೇರಿದಂತೆ ಎಲ್ಲರು ಗಂಭೀರವಾಗಿ ಚಿಂತಿಸಬೇಕಿದೆ’ ಎಂದರು.

‘ಕನ್ನಡದಲ್ಲಿ ಬ್ಯಾಂಕಿಂಗ್‌ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗಮನ ಸೆಳೆಯಲಿದೆ. ಕನ್ನಡ ಸೇರಿದಂತೆ ದೇಶದ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿಯೂ ಬ್ಯಾಂಕಿಂಗ್‌ ಪರೀಕ್ಷೆಗೆ ನಡೆಯಬೇಕು ಎಂಬುದು ನನ್ನ ನಿಲುವು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.