ADVERTISEMENT

ಶಿವಮೊಗ್ಗ: ಕ್ಯಾನ್ಸರ್ ಭಯ ಬೇಡ, ಜಾಗೃತಿ ಇರಲಿ: ಎಸ್ಪಿ

ಸೇಕ್ರೆಡ್‌ಹಾರ್ಟ್ ಚರ್ಚ್ ಆವರಣ: ಕ್ಯಾನ್ಸರ್ ಜಾಗೃತಿ ಜಾಥಾಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:51 IST
Last Updated 5 ಫೆಬ್ರುವರಿ 2023, 7:51 IST
ಶಿವಮೊಗ್ಗದ ಸೆಕ್ರೆಡ್‌ಹಾರ್ಟ್ ಚರ್ಚ್ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಅವರು ಶನಿವಾರ ಚಾಲನೆ ನೀಡಿದರು.
ಶಿವಮೊಗ್ಗದ ಸೆಕ್ರೆಡ್‌ಹಾರ್ಟ್ ಚರ್ಚ್ ಆವರಣದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಅವರು ಶನಿವಾರ ಚಾಲನೆ ನೀಡಿದರು.   

ಶಿವಮೊಗ್ಗ: ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ. ಪ್ರಾರಂಭದಲ್ಲೇ ಸ್ಕ್ರೀನಿಂಗ್ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಪಡಿಸಬಹುದು, ಜನರು ಆತಂಕ ಪಡಬೇಕಿಲ್ಲ ಎಂದು ಎಸ್ಪಿ ಜಿ.ಕೆ ಮಿಥುನ್‌ಕುಮಾರ್ ಹೇಳಿದರು.

ಇಲ್ಲಿನ ಸೆಕ್ರೆಡ್‌ಹಾರ್ಟ್ ಚರ್ಚ್ ಆವರಣದಲ್ಲಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಕಾರಿತಾಸ್ ಇಂಡಿಯಾ ದೆಹಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಮ್ಸ್, ಮೆಗ್ಗಾನ್ ಆಸ್ಪತ್ರೆ, ಅನುಗ್ರಹ ಸೋಶಿಯಲ್ ವೆಲ್‌ಫೆರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆಯ ಸಮೂಹ ಸಂಸ್ಥೆ, ಸಹ್ಯಾದ್ರಿ ಕಲಾ ಕಾಲೇಜು, ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮನುಷ್ಯನ ಜೀವನ ಕ್ರಮ, ಆಹಾರ ಪದ್ಧತಿ, ಆಲಸ್ಯದ ಮನೋಭಾವ, ಅನಿಯಮಿತ ರಾಸಾಯನಿಕ ಆಹಾರ ಸೇವನೆಯಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ. ಆದರೆ ಹೆದರುವ ಅವಶ್ಯಕತೆ ಇಲ್ಲ. ಪ್ರಾರಂಭದಲ್ಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಸಣ್ಣ-ಪುಟ್ಟ ರೋಗ ಲಕ್ಷಣ ಕಂಡಾಗ ತಡಮಾಡದೆ ಚಿಕಿತ್ಸೆ ಪಡೆದರೆ ಗುಣಪಡಿಸಲು ಸಾಧ್ಯ ಎಂದರು.

ADVERTISEMENT

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ಜಾಥ ಹಮ್ಮಿಕೊಳ್ಳಲಾಗಿದೆ. ಆರೋಗ್ಯದ ಬಗ್ಗೆ ಎಚ್ಚರವಿರಲಿ ಎಂದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಫಾದರ್ ಕ್ಲಿಫರ್ಡ್ ರೋಷನ್ ಪಿಂಟೊ, ಫಾದರ್ ಡಾ.ಅಬ್ರಾಹಂ ಅರೀಪರಂಬಿಲ್, ಡಾ.ನಮ್ರತಾ ಉಡುಪ, ಜಗದೀಶ್, ಪರಶುರಾಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.