ADVERTISEMENT

ಚಿತ್ರದುರ್ಗ: ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 6:15 IST
Last Updated 5 ಫೆಬ್ರುವರಿ 2023, 6:15 IST
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನ ಹಾಗೂ ಕ್ಯಾನ್ಸರ್ ನಿವಾರಣೆ ಜಾಗೃತಿ ಕಾರ್ಯಕ್ರಮವನ್ನು ತಜ್ಞ ವೈದ್ಯ ಡಾ.ಜಗದೀಶ್ ತುಬಚಿ ಉದ್ಘಾಟಿಸಿದರು.
ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನ ಹಾಗೂ ಕ್ಯಾನ್ಸರ್ ನಿವಾರಣೆ ಜಾಗೃತಿ ಕಾರ್ಯಕ್ರಮವನ್ನು ತಜ್ಞ ವೈದ್ಯ ಡಾ.ಜಗದೀಶ್ ತುಬಚಿ ಉದ್ಘಾಟಿಸಿದರು.   

ಚಿತ್ರದುರ್ಗ: ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ.‌ ರೋಗದ ನಿವಾರಣೆಗೆ ಪ್ರತಿ 60 ಕಿ.ಮೀಗೆ ಒಂದೊಂದು ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆಗಳನ್ನು ನಿರ್ಮಿಸಬೇಕು ಎಂದು ತಜ್ಞ ವೈದ್ಯ ಡಾ.ಜಗದೀಶ್ ತುಬಚಿ
ಹೇಳಿದರು.

ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಶನಿವಾರ ಬಸವೇಶ್ವರ ವೈದ್ಯಕೀಯ ಕಾಲೇಜು ಹಾಗೂ ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗ
ದಲ್ಲಿ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ದಿನ ಹಾಗೂ ಕ್ಯಾನ್ಸರ್ ನಿವಾರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದೇಶಗಳಲ್ಲಿ ಪ್ರತಿ ವರ್ಷ 2 ಲಕ್ಷಕ್ಕೂ ಅಧಿಕ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ಮಧ್ಯ ಕರ್ನಾಟಕ ಭಾಗದಲ್ಲಿ ವರ್ಷಕ್ಕೆ ಸುಮಾರು 3 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಕಾರಣಕ್ಕೆ ಚಿತ್ರದುರ್ಗದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮುಂದಾಗಿದೆ’ ಎಂದು ತಿಳಿಸಿದರು.

ADVERTISEMENT

‘ದೇಶದಲ್ಲಿ ಹೆಣ್ಣು ಮಕ್ಕಳು ಹೆಚ್ಚಾಗಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಅದರಲ್ಲೂ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಮಸ್ಯೆ ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು’
ಎಂದರು.

ಬಸವೇಶ್ವರ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಫಾಲಾಕ್ಷಪ್ಪ, ಡಾ.ಅಜೇಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.